ಉಳ್ಳಾಲ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಉಳ್ಳಾಲ ತಾಲೂಕು ಘಟಕದ 2022-2025 ಸಾಲಿಗೆ ಅಧ್ಯಕ್ಷರಾಗಿ ವಸಂತ ಕೊಣಾಜೆ, ಉಪಾಧ್ಯಕ್ಷರಾಗಿ ದಿನೇಶ್, ಆರಿಫ್ ಕಲ್ಕಟ್ಟ ಆಯ್ಕೆಯಾಗಿದ್ದಾರೆ.
ಪ್ರಧಾನ ಕಾರ್ಯದರ್ಶಿಯಾಗಿ ಶಶಿಧರ ಪೊಯ್ಯತ್ತ ಬೈಲ್, ಕಾರ್ಯದರ್ಶಿಯಾಗಿ ಸತೀಶ್ ಕೊಣಾಜೆ, ವಜ್ರೇಶ್ವರಿ ಕೋಶಾಧಿಕಾರಿಯಾಗಿ ಅಬ್ದುಲ್ ಬಶೀರ್, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಪ್ರಸಾದ್ ಸುವರ್ಣ, ಶ್ವೇತಾ, ಶಿವಶಂಕರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಉಳ್ಳಾಲ ತಾಲೂಕು ಕಾರ್ಯ ನಿರತ ಪತ್ರ ಕರ್ತರ ಸಂಘದ ಚುನಾವಣಾಧಿಕಾರಿ ಪುಷ್ಪರಾಜ್ ಬಿ.ಎನ್ ಅವರು ನೂತನ ಪದಾಧಿಕಾರಿಗಳ ಘೋಷಣೆ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಉಪಚುನಾವಣಾಧಿಕಾರಿ ರಾಜೇಶ್ ಕುಮಾರ್ ದಡ್ಡಂಗಡಿ, ಸಹಾಯಕ ಚುನಾವಣಾಧಿಕಾರಿ ಭರತ್ ರಾಜ್ ಉಪಸ್ಥಿತರಿದ್ದರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ, ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಮೋಹನ್ ಕುತ್ತಾರು, ರಾಜ್ಯ ಕಾರ್ಯ ಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ, ರಾಷ್ಟ್ರೀಯ ಕಾರ್ಯ ನಿರತ ಪತ್ರ ಕರ್ತರ ಸಂಘದ ಕಾರ್ಯ ಕಾರಿ ಸಮಿತಿ ಸದಸ್ಯ ಪಿ.ಬಿ.ಹರೀಶ್ ರೈ ಉಪಸ್ಥಿತರಿದ್ದರು.