ಸುರತ್ಕಲ್ ಜಲೀಲ್  ಹತ್ಯೆ ಪ್ರಕರಣ: ವಿಮೆನ್ ಇಂಡಿಯಾ ಮೂವ್ಮೆಂಟ್ ಖಂಡನೆ

Prasthutha|

ಮಂಗಳೂರು: ಚುನಾವಣೆ ಹತ್ತಿರವಾಗುತ್ತಿದ್ದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಪ್ರಚೋದಿತ ಕೊಲೆಗಳು, ಅನೈತಿಕ ಪೊಲೀಸ್ ಗಿರಿ, ಕೋಮು ವೈಷಮ್ಯಗಳು ಹೆಚ್ಚಾಗುತ್ತಾ ಇವೆ. ಇದಕ್ಕೆ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ವಿಮೆನ್ ಇಂಡಿಯಾ ಮೂವ್ಮೆಂಟ್ ಆರೋಪಿಸಿದೆ.

- Advertisement -

ಚುನಾಯಿತ ಪ್ರತಿನಿಧಿಗಳ ತಾರತಮ್ಯ ನೀತಿ, ಪೊಲೀಸರ  ನಿರ್ಲಕ್ಷ್ಯ ಧೋರಣೆಗಳಿಂದಾಗಿ, ಶೋಷಿತ ವರ್ಗದ ಜನರಿಗೆ ವ್ಯವಸ್ಥೆಯ ಮೇಲೆ ಭರವಸೆ ಇಲ್ಲದಂತಾಗಿದೆ. ಹಿಂದಿನ ಕೊಲೆ ಪ್ರಕರಣಗಳಲ್ಲಿನ ನ್ಯಾಯದ ಮರೀಚಿಕೆ ಹಾಗೂ ಸರಕಾರದ ಫ್ಯಾಶಿಸ್ಟ್ ಧೋರಣೆ ಇಂದು ಸುರತ್ಕಲ್’ನಲ್ಲಿ ಕೃಷ್ಣಾಪುರ ನಿವಾಸಿ ಜಲೀಲ್ ಅವರ ಅಮಾನುಷ ಕೊಲೆಗೆ ಮುಖ್ಯ ಕಾರಣ. ಇದರಿಂದ ಇನ್ನಷ್ಟು ಸಮಾಜಘಾತುಕ ಕೃತ್ಯಗಳಲ್ಲಿ ತೊಡಗಿಸಿಕೊಳ್ಳಲು ಅಪರಾಧಿಗಳ ಆತ್ಮಸ್ಥೈರ್ಯ  ಹೆಚ್ಚುವುದರಲ್ಲಿ ಸಂಶಯವಿಲ್ಲ ಎಂದು ಇಂಡಿಯಾ ಮೂವ್ಮೆಂಟ್ ದಕ್ಷಿಣ  ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಝಹನಾ ಬಂಟ್ವಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 ಸರ್ಕಾರ ಈ ಕೂಡಲೇ ಎಚ್ಚೆತ್ತುಕೊಂಡು ಶಾಂತಿ – ಸುವ್ಯವಸ್ಥೆಯನ್ನು ಕಾಪಾಡಲು ಕ್ರಮ ಕೈಗೊಳ್ಳಬೇಕು. ಮಾತ್ರವಲ್ಲದೇ   ಜಲೀಲ್ ಅವರ ಕುಟುಂಬಕ್ಕೆ ಸೂಕ್ತ ಪರಿಹಾರವನ್ನು ಒದಗಿಸಬೇಕು. ಪೊಲೀಸರು ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ಅಪರಾಧಿಗಳಿಗೆ ಕಠಿಣ ಶಿಕ್ಷೆಯನ್ನು ನೀಡಬೇಕು ಎಂದು ಝಹನಾ ಬಂಟ್ವಾಳ ಆಗ್ರಹಿಸಿದ್ದಾರೆ.



Join Whatsapp