ಮಂಗಳೂರು: ಸುರತ್ಕಲ್ ನಿವಾಸಿ, ಸಣ್ಣ ವ್ಯಾಪಾರದ ಮೂಲಕ ಬದುಕು ಸಾಗಿಸುತ್ತಿದ್ದ ಜಲೀಲ್ ಅವರನ್ನು ದುಷ್ಕರ್ಮಿಗಳು ಕೊಲೆಗೈದಿರುವುದನ್ನು ಸೌತ್ ಕರ್ನಾಟಕ ಸಲಫಿ ಮೂವ್’ಮೆಂಟ್ ತೀವ್ರವಾಗಿ ಖಂಡಿಸಿದೆ.
ಸೌತ್ ಕರ್ನಾಟಕ ಸಲಫಿ ಮೂವ್’ಮೆಂಟ್ ಪ್ರಧಾನ ಕಾರ್ಯದರ್ಶಿ ಕೆ. ಅಬ್ದುಲ್ ರಹಿಮಾನ್ ಉಪ್ಪಿನಂಗಡಿ ಪತ್ರಿಕಾ ಪ್ರಕಟನೆ ಬಿಡುಗಡೆ ಮಾಡಿದ್ದು, ರಾಜ್ಯ ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ಕೊಲೆಯಾದ ಜಲೀಲ್ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಮತ್ತು ಪರಿಹಾರ ನೀಡಬೇಕು. ಆರೋಪಿಗಳು ಯಾವುದೇ ಧರ್ಮ ಜಾತಿ, ಪಕ್ಷಕ್ಕೆ ಸೇರಿದ್ದರೂ ಯಾವುದೇ ಒತ್ತಡಗಳಿಗೆ ಮಣಿಯದೆ ಕಠಿಣ ಕಾನೂನು ಕ್ರಮವನ್ನು ಕೈಗೊಳ್ಳಬೇಕು. ಆರೋಪಿಗಳ ವಿರುದ್ಧ ಯುಎಪಿಎ ಕಾಯ್ದೆಯಡಿ ಪ್ರಕರಣವನ್ನು ದಾಖಲಿಸಬೇಕು ಎಂದು ಒತ್ತಾಯಿಸಿದ್ದಾರೆ.