ಮವೂ: ಮನೆಯೊಂದರಲ್ಲಿ ಸಂಭವಿಸಿದ ಅಗ್ನಿ ಅನಾಹುತಕ್ಕೆ ಒಂದೇ ಕುಟುಂಬದ ಐದು ಮಂದಿ ಮೃತಪಟ್ಟ ಘಟನೆ ಉತ್ತರ ಪ್ರದೇಶದ ಮವೂ ಜಿಲ್ಲೆಯ ಶಹಾಪುರ ಗ್ರಾಮದಲ್ಲಿ ನಡೆದಿದೆ.
ಕೋಪಗಂಜ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಘಟನೆಯ ಬಗ್ಗೆ ಮಾಹಿತಿ ಪಡೆದ ಕೂಡಲೇ ಪೊಲೀಸರು, ಅಗ್ನಿಶಾಮಕ ಮತ್ತು ವೈದ್ಯಕೀಯ ತಂಡಗಳು ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿವೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ.
ಮೃತಪಟ್ಟವರಲ್ಲಿ ಮಹಿಳೆ ಹಾಗೂ ಮೂವರು ಅಪ್ರಾಪ್ತರು ಸೇರಿದ್ದಾರೆ ಎಂದು ಜಿಲ್ಲಾಧಿಕಾರಿ ಅರುಣ್ ಕುಮಾರ್ ತಿಳಿಸಿದ್ದಾರೆ.
ಸ್ಟೌ ನಿಂದ ಬೆಂಕಿ ಹೊತ್ತಿಕೊಂಡಿರುವ ಬಗ್ಗೆ ಪ್ರಾಥಮಿಕ ವರದಿಯಲ್ಲಿ ತಿಳಿದು ಬಂದಿದೆ.