ಮಂಗಳೂರು: ಜಿಲ್ಲಾ ನ್ಯಾಯಾಂಗ, ಲೋಕೋಪಯೋಗಿ ಇಲಾಖೆ ಹಾಗೂ ಮೂಡಬಿದರಿ ವಕೀಲರ ಸಂಘದ ಸಂಯುಕ್ತಾಶ್ರಯದಲ್ಲಿ ಮೂಡಬಿದಿರೆಯ ನ್ಯಾಯಾಲಯದ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಹಿರಿಯ ಸಿವಿಲ್ ಮತ್ತು ಜೆಎಂಎಫ್’ಸಿ ನ್ಯಾಯಾಲಯ ಹಾಗೂ ವಕೀಲರ ಭವನವನ್ನು ಶುಕ್ರವಾರ ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿಗಳಾದ ಎಸ್. ಅಬ್ದುಲ್ ನಝೀರ್ ಹಾಗೂ ರಾಜ್ಯ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಳೆ ಲೋಕಾರ್ಪಣೆ ಮಾಡಿದರು.
ರಾಜ್ಯ ಹೈಕೋರ್ಟ್ನ ನ್ಯಾಯಮೂರ್ತಿಗಳು ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷರಾದ ಬಿ. ವೀರಪ್ಪ, ನ್ಯಾಯಮೂರ್ತಿಗಳಾದ ಎಸ್.ಜಿ. ಪಂಡಿತ್, ಪ್ರದೀಪ್ ಸಿಂಗ್ ಯೆರೂರ್, ಎಸ್. ವಿಶ್ವಜಿತ್ ಶೆಟ್ಟಿ, ಸಿ. ಎಂ. ಜೋಶಿ, ಟಿ.ಜಿ. ಶಿವಶಂಕರೇಗೌಡ ಉಪಸ್ಥಿತರಿದ್ದರು.
ಮೂಡಬಿದಿರೆ ಶಾಸಕ ಉಮಾನಾಥ ಎ. ಕೋಟ್ಯಾನ್, ದಕ್ಷಿಣ ಕನ್ನಡ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರವೀಂದ್ರ ಎಂ ಜೋಷಿ,
ರಾಜ್ಯ ಹೈಕೋರ್ಟ್ ಮಹಾ ಲೇಖನಾಧಿಕಾರಿ ಮುರಲಿಧರ ಪೈ ಬಿ., ಹಿರಿಯ ವಕೀಲರು ಹಾಗೂ ಬೆಂಗಳೂರಿನ ರಾಜ್ಯ ವಕೀಲರ ಪರಿಷತ್ತಿನ ಸದಸ್ಯರಾದ ಪಿ.ಪಿ. ಹೆಗ್ಡೆ, ಮೂಡಬಿದಿರೆ ವಕೀಲರ ಸಂಘದ ಸಂಸ್ಥಾಪಕ ಅಧ್ಯಕ್ಷ ಎಂ. ಬಾಹುಬಲಿ ಪ್ರಸಾದ್ ಭಾಗವಹಿಸಿದ್ದರು.