ಉತ್ತರಾಖಂಡ: ಡೆಹ್ರಾಡೂನ್’ನ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕ್ರಿಕೆಟರ್ ರಿಷಭ್ ಪಂತ್ ಅವರ ಆರೋಗ್ಯ ಸುಧಾರಿಸುತ್ತಿದೆ ಎಂದು ವೈದ್ಯರು ಹೇಳಿದ್ದಾರೆ.
ಅವರನ್ನು ಇದೀಗ ಐಸಿಯುನಿಂದ ಖಾಸಗಿ ವಾರ್ಡ್’ಗೆ ಸ್ಥಳಾಂತರಿಸಲಾಗಿದೆ. ವೈದ್ಯರು ನೀಡಿರುವ ಮಾಹಿತಿ ಪ್ರಕಾರ, ರಿಷಭ್ ಪಂತ್ ಆರೋಗ್ಯದಲ್ಲಿ ಚೇತರಿಕೆ ಉಂಟಾಗಿದೆ. ಅವರ ಕಾಲಿನ ಅಸ್ಥಿರಜ್ಜು ಚಿಕಿತ್ಸೆಯ ಕುರಿತು ಬಿಸಿಸಿಐ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ತಿಳಿದು ಬಂದಿದೆ.
ಪಂತ್ ಅವರಿಗೆ ಉತ್ತಮ ಚಿಕಿತ್ಸೆ ನೀಡಲಾಗುತ್ತಿದೆ, ಆರೋಗ್ಯದಲ್ಲಿ ಸುಧಾರಣೆ ಕಂಡುಬರುತ್ತಿದೆ ಎಂದು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಸಂತಸ ವ್ಯಕ್ತಪಡಿಸಿದ್ದಾರೆ.