ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ಸ್ವಯಂ ಸ್ವಚ್ಛತಾ ಜಾಗೃತಿ ನಗರದ ಸ್ವಚ್ಛತೆಗೆ ಪೂರಕ ಎಂದು ಮನಪಾ ಆಯುಕ್ತ ಅಕ್ಷಯ್ ಶ್ರೀಧರ್ ತಿಳಿಸಿದ್ದಾರೆ.
ಭಾರತೀಯ ರೆಡ್ ಕ್ರಾಸ್ ಸಂಸ್ಥೆ ದಕ್ಷಿಣ ಕನ್ನಡ ಜಿಲ್ಲಾ ಘಟಕ, ಬೆಸೆಂಟ್ ಮಹಿಳಾ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕ ಹಾಗೂ ದ.ಕ.ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಸಹಭಾಗಿತ್ವದಲ್ಲಿ ನಗರದ ಮನಪಾ ಕಚೇರಿ ಬಳಿಯ ಬಸ್ ತಂಗುದಾಣ ದ ಸ್ವಚ್ಛ ಸುಂದರ ಮಂಗಳೂರು ಕಾರ್ಯಕ್ರಮ ವನ್ನುದ್ದೇಶಿಸಿ ಅವರು ಇಂದು ಮಾತನಾಡುತ್ತಿದ್ದರು.
ನಮ್ಮ ನಗರವನ್ನು ನಾವೇ ಸ್ವಚ್ಛ ವಾಗಿಡ ಬೇಕು ಎಂದು ಯುವ ಜನರಲ್ಲಿ ವಿದ್ಯಾರ್ಥಿ ಗಳಲ್ಲಿ ಸ್ವಚ್ಛತಾ ಕಾರ್ಯಕ್ರಮದ ಬಗ್ಗೆ ಸ್ವಯಂ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ನಗರದಲ್ಲಿ ಬಸ್ ತಂಗುದಾಣಗಳ ಸ್ವಚ್ಛತೆ, ಗಿಡ ನೆಡುವ ಕಾರ್ಯ ಕ್ರಮಗಳು ಮಾದರಿಯಾಗಿದೆ ಎಂದು ಅಕ್ಷಯ್ ಶ್ರೀಧರ್ ತಿಳಿಸಿದ್ದಾರೆ.
ದ.ಕ ಜಿಲ್ಲಾ ಕಾರ್ಯ ನಿರತ ಪತ್ರ ಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ರಾಜ್ಯ ಮಾಧ್ಯಮ ಅಕಾಡೆಮಿಯ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಯ ಪ್ರತಿನಿಧಿಗಳಾದ ರವೀಂದ್ರನಾಥ ಉಚ್ಚಿಲ್, ಪತ್ರಕರ್ತರ ರಾಷ್ಟ್ರೀಯ ಒಕ್ಕೂಟದ ಕಾರ್ಯಕಾರಿ ಸಮಿತಿ ಸದಸ್ಯ ಪಿ.ಬಿ.ಹರೀಶ್ ರೈ, ದ.ಕ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್, ಉಪಾಧ್ಯಕ್ಷ ಭಾಸ್ಕರ್ ರೈ ಕಟ್ಟ ,ಕಾರ್ಯಕಾರಿ ಸಮಿತಿ ಸದಸ್ಯ ರಾದ ರಾಜೇಶ್ ದೊಡ್ಡಂಗಡಿ,ಶ್ರವಣ್ ಕುಮಾರ್ ನಾಳ ಮೊದಲಾದವರು ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು.
ಬೆಸೆಂಟ್ ಮಹಿಳಾ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ನಿರ್ದೇಶಕಿ ದೀಕ್ಷಿತಾ, ಸಹ ಸಂಯೋಜಕರಾದ ಸ್ವಾತಿ, ಕೀರ್ತಿ ಹಾಗೂ ಕಾರ್ಯದರ್ಶಿ ಶ್ರೀಜಾ ಉಪ ಸ್ಥಿತರಿದ್ದರು.
ಬೆಸೆಂಟ್ ಮಹಿಳಾ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ವಿದ್ಯಾರ್ಥಿನಿಯರು ಮಂಗಳೂರು ಮಹಾನಗರ ಪಾಲಿಕೆಯ ಬಸ್ ತಂಗುದಾಣ ದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.