ಅಕ್ಟೋಬರ್-ನವೆಂಬರ್ನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್’ಗಾಗಿ ಬಿಸಿಸಿಐ ಸಂಭಾವ್ಯ ತಂಡವನ್ನು ಪ್ರಕಟಿಸಿದೆ.
ಮುಂಬರುವ ಏಕದಿನ ವಿಶ್ವಕಪ್ ಅನ್ನು ಗಮನದಲ್ಲಿರಿಸಿ ಬಿಸಿಸಿಐ ಇಪ್ಪತ್ತು ಆಟಗಾರರನ್ನು ಫೈನಲ್ ಮಾಡಿದ್ದು, ಮುಂಬರುವ ಸರಣಿಗಳಲ್ಲಿ ಈ ಆಟಗಾರರ ಪೈಕಿ ಅತ್ಯುತ್ತಮ ಪ್ರದರ್ಶನ ನೀಡುವ 16 ಆಟಗಾರರನ್ನು ಏಕದಿನ ವಿಶ್ವಕಪ್ಗಾಗಿ ಬಿಸಿಸಿಐ ಆಯ್ಕೆ ಮಾಡಲಿದೆ. ಹೀಗಾಗಿ ಮುಂಬರುವ ಸರಣಿಗಳು ಟೀಮ್ ಇಂಡಿಯಾ ಆಟಗಾರರ ಪಾಲಿಗೆ ಮಹತ್ವದೆನಿಸಿಕೊಂಡಿದೆ.
ವಿಶ್ವಕಪ್ ಪಂದ್ಯಕ್ಕೂ ಮುನ್ನ ನಡೆಯಲಿರುವ 35 ಏಕದಿನ ಪಂದ್ಯಗಳಲ್ಲಿ 20 ಆಟಗಾರರನ್ನು ಕಣಕ್ಕಿಳಿಸಿ ಪ್ರಯೋಗ ನಡೆಸಲಾಗುತ್ತದೆ. ಬಿಸಿಸಿಐ ಒಟ್ಟು 20 ಆಟಗಾರರನ್ನು ಆಯ್ಕೆ ಮಾಡಿ, ಮುಂಬರುವ ಏಕದಿನ ವಿಶ್ವಕಪ್ಗಾಗಿ ಬಲಿಷ್ಠ ಬಳಗವನ್ನು ಸೃಷ್ಟಿಸಲು ಪ್ಲ್ಯಾನ್ ರೂಪಿಸಿದೆ.
ಆಯ್ಕೆಯಾಗಿರುವ 20 ಸಂಭಾವ್ಯ ಆಟಗಾರರ ಪಟ್ಟಿ ಹೀಗಿದೆ…
ರೋಹಿತ್ ಶರ್ಮ, ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಇಶಾನ್ ಕಿಶನ್, ರಿಷಭ್ ಪಂತ್, ಕೆಎಲ್ ರಾಹುಲ್, ಸಂಜು ಸ್ಯಾಮ್ಸನ್, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಹಾಲ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್.