ಬೆಂಗಳೂರು: ರೈಲ್ವೇ ನಿಲ್ದಾಣದಲ್ಲಿ ಕುಸಿದುಬಿದ್ದು ವೀರಮಹಾಂತ ಶಿವಾಚಾರ್ಯ ಸ್ವಾಮೀಜಿ ಮೃತ್ಯು

Prasthutha|

ಬೆಂಗಳೂರು: ಇಲ್ಲಿನ ಕಂಟೋನ್ಮೆಂಟ್ ರೈಲ್ವೇ ನಿಲ್ದಾಣದಲ್ಲಿ ಕುಸಿದು ಬಿದ್ದು ಯಾದಗಿರಿ ಜಿಲ್ಲೆಯ ದೋರನಹಳ್ಳಿಯ ಹಿರೇಮಠದ ವೀರಮಹಾಂತ ಶಿವಾಚಾರ್ಯ ಸ್ವಾಮೀಜಿ ನಿಧನ ಹೊಂದಿದ್ದಾರೆ.

- Advertisement -

ಅವರು ಜನವರಿ 11ರಂದು ಬೆಂಗಳೂರಿನಿಂದ ಯಾದಗಿರಿಗೆ  ಹಿಂದಿರುಗುವಾಗ ಹೃದಯಾಘಾತದಿಂದ ನಿಧನರಾಗಿದ್ದಾರೆ ಎನ್ನಲಾಗಿದೆ.

ಮುಂದಿನ ತಿಂಗಳು ನಡೆಯಲಿರುವ ತಮ್ಮ 25ನೇ ಪಟ್ಟಾಧಿಕಾರ ಮಹೋತ್ಸವಕ್ಕೆ ಗಣ್ಯರನ್ನು ಆಹ್ವಾನ ಮಾಡಲು ಬೆಂಗಳೂರಿಗೆ ಆಗಮಿಸಿದ್ದ ಅವರು ಯಾದಗಿರಿಗೆ ಹಿಂತಿರುಗುವಾಗ ಈ ಘಟನೆ ನಡೆದಿದೆ.  ದಿಢೀರ್ ಕುಸಿದು ಬಿದ್ದ ಸ್ವಾಮೀಜಿಯನ್ನು ಭಕ್ತರು ಕೂಡಲೇ ಆಸ್ಪತ್ರೆಗೆ ಸಾಗಿಸುವಾಗ ಅವರು ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

- Advertisement -



Join Whatsapp