ಕನ್ನಡಿಗರ ಆಕ್ರೋಶಕ್ಕೆ ಮಣಿದು ಗಣರಾಜ್ಯೋತ್ಸವ ಪರೇಡ್’ನಲ್ಲಿ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಿದ ಕೇಂದ್ರ ಸರ್ಕಾರ

Prasthutha|

ಬೆಂಗಳೂರು: ಈ ಬಾರಿಯ ಗಣರಾಜ್ಯೋತ್ಸವದ ಪ್ರಯುಕ್ತ ನವದೆಹಲಿಯಲ್ಲಿ ನಡೆಯಲಿರುವ ಪರೇಡ್’ನಲ್ಲಿ ಕರ್ನಾಟಕದ ಸ್ತಬ್ಧ ಚಿತ್ರಕ್ಕೆ ಅವಕಾಶ ನಿರಾಕರಿಸಿದ್ದ ಕೇಂದ್ರ ಸರ್ಕಾರ, ಕನ್ನಡಿಗರ ಆಕ್ರೋಶಕ್ಕೆ ಮಣಿದು ಕೊನೆಗೂ ರಾಜ್ಯದ ಸ್ತಬ್ದಚಿತ್ರ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಿದೆ

- Advertisement -

ಪದ್ಮಶ್ರಿ ಪುರಸ್ಕೃತರಾದ ಸೂಲಗಿತ್ತಿ ನರಸಮ್ಮ, ಸಾಲುಮರದ ತಿಮ್ಮಕ್ಕ ಮತ್ತು ತುಳಸಿಗೌಡ ಹಾಲಕ್ಕಿ ಅವರ ಸಾಧನೆಗಳನ್ನು ಬಿಂಬಿಸುವ ಕರ್ನಾಟಕದ ‘ನಾರಿ ಶಕ್ತಿ ವಿಷಯದ ಸ್ತಬ್ಧ ಚಿತ್ರವನ್ನು ಅಂತಿಮ ಹಂತದಲ್ಲಿ ಕೇಂದ್ರ ಸರ್ಕಾರ ಕೈ ಬಿಟ್ಟಿತ್ತು. ಇದಕ್ಕೆ   ರಾಜ್ಯಾದ್ಯಂತ ತೀವ್ರ ಜನಾಕ್ರೋಶ ವ್ಯಕ್ತವಾಗಿತ್ತು.

  ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಕನ್ನಡಿಗರು ತಿರುಗಿಬಿದ್ದಿದ್ದರು. ಚುನಾವಣಾ ವರ್ಷದಲ್ಲಿ ಈ ರೀತಿ ರಾಜ್ಯವನ್ನು ನಿರ್ಲಕ್ಷಿಸುವುದು ಸರಿಯಲ್ಲ ಎಂಬ ತೀರ್ಮಾನಕ್ಕೆ ಬಂದಿರುವ ಕೇಂದ್ರದ ಬಿಜೆಪಿ ಸರ್ಕಾರ, ಕೊನೆಗೂ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಿದೆ.



Join Whatsapp