ಹೊಸದಿಲ್ಲಿ: ಮಾಜಿ ಕೇಂದ್ರ ಸಚಿವ ಮತ್ತು RJD ಪಕ್ಷದ ಹಿರಿಯ ನಾಯಕ ಶರದ್ ಯಾದವ್ ಅವರು ಗುರುವಾರ ನಿಧನರಾಗಿದ್ದಾರೆ.
ಅವರಿಗೆ 75 ವರ್ಷ ವಯಸ್ಸಾಗಿತ್ತು. ಶರದ್ ಯಾದವ್ ಅವರ ನಿಧನದ ಸುದ್ದಿಯನ್ನು ಪುತ್ರಿ ಸುಭಾಷಿಣಿ ಶರದ್ ಯಾದವ್ ಟ್ವೀಟ್ ಮೂಲಕ ಖಚಿತಪಡಿಸಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಶರದ್ ಯಾದವ್ ಅವರನ್ನು ಗುರುಗ್ರಾಮ್ನ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಕೊನೆಯುಸಿರೆಳೆದಿದ್ದಾರೆ.