ಮಂಗಳೂರು: ಗಾಂಜಾ ಸಾಗಾಟ ಹಾಗೂ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ವೈದ್ಯರು ಮತ್ತು ವೈದ್ಯ ವಿದ್ಯಾರ್ಥಿನಿಯರನ್ನು ಬಂಧಿಸಿದ್ದ ಮಂಗಳೂರು ಪೊಲೀಸರು, ಮತ್ತೆ ಇಂದು ಇಬ್ಬರನ್ನು ಬಂಧಿಸಿದ್ದಾರೆ.
ಇದರೊಂದಿಗೆ ಬಂಧಿತ ಆರೋಪಿಗಳ ಸಂಖ್ಯೆ 15ಕ್ಕೇರಿದೆ ಎಂದು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ.
ಆಂಧ್ರಪ್ರದೇಶದ ಡಾ. ರಾಘವ ದತ್ತಾ(28), ಬೆಂಗಳೂರು ನಿವಾಸಿ ಡಾ: ಬಾಲಾಜಿ 29) ಬಂಧಿತ ಆರೋಪಿಗಳು.
ಇದೇ ಪ್ರಕರಣಕ್ಕೆ ಸಂಬಂಧಿಸಿ ಕೇರಳ ಮೂಲದ ಡಾ ಸಮೀರ್ (32), ಡಾ. ನಾದಿಯಾ ಸಿರಾಜ್ (24), ತಮಿಳುನಾಡಿನ ಡಾ ಮಣಿಮಾರನ್ ಮುತ್ತು (28), ಆಂಧ್ರದ ಡಾ ವರ್ಷಿಣಿ ಪ್ರತಿ (26), ಪಂಜಾಬ್’ನ ಡಾ ಭಾನು ಧಾಹಿಯಾ (27), ಚಂಡಿಘಡದ ಡಾ. ರಿಯಾ ಚಡ್ಡಾ (22), ದೆಹಲಿಯ ಡಾ. ಕ್ಷಿತಿಜ್ ಗುಪ್ತಾ (25), ಮಹಾರಾಷ್ಟ್ರದ ಡಾ ಇರಾ ಬಸಿನ್ (23) ಮತ್ತು ಬಂಟ್ವಾಳ ಮಾರಿಪಳ್ಳದ ಮುಹಮ್ಮದ್ ರವೂಫ್ ಗೌಸ್ (34), ಡಾ.ಹರ್ಷ ಕುಮಾರ್, ಮುಹಮ್ಮದ್ ಅಫ್ರಾರ್ (23) ಸೇರಿ ಒಟ್ಟು 15 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.