ದ.ಕ. ಜಿಲ್ಲೆಯಲ್ಲಿ ಮುಂದುವರಿದ ಅನೈತಿಕ ಪೊಲೀಸ್’ಗಿರಿ| ಬಸ್’ನಲ್ಲಿ ಪ್ರಯಾಣಿಸುತ್ತಿದ್ದ ಮುಸ್ಲಿಂ ವಿದ್ಯಾರ್ಥಿಗೆ ಹಲ್ಲೆ

Prasthutha|

ವಿಟ್ಲ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಘಪರಿವಾರದ ಅನೈತಿಕ ಪೊಲೀಸ್’ಗಿರಿ ಮುಂದುವರಿದಿದ್ದು, ಬಸ್’ನಲ್ಲಿ ಪ್ರಯಾಣಿಸುತ್ತಿದ್ದ ಮುಸ್ಲಿಂ ವಿದ್ಯಾರ್ಥಿ ಗೆ ಹಲ್ಲೆ ನಡೆಸಿರುವ ಬಗ್ಗೆ ವರದಿಯಾಗಿದೆ.

- Advertisement -

ಬಸ್ಸಿನಲ್ಲಿ ವಿದ್ಯಾರ್ಥಿನಿಯೊಬ್ಬಳ ಜತೆ ಮಾತನಾಡಿ, ಆಕೆಗೆ ಚಾಕಲೇಟ್ ನೀಡಲು ಮುಂದಾಗಿದ್ದಾನೆ ಎಂದು ಆರೋಪಿಸಿ ಮುಸ್ಲಿಮ್ ವಿದ್ಯಾರ್ಥಿಗೆ ವೀರಕಂಬ ಗ್ರಾಮದ ಕೆಲಿಂಜ ಎಂಬಲ್ಲಿ ಹಲ್ಲೆ ನಡೆಸಲಾಗಿದೆ.


ವೀರಕಂಬ ಗ್ರಾಮದ ಮಂಗಳಪದವು ನಿವಾಸಿ ಮಹಮ್ಮದ್ ಶಾಕೀರ್ ಕಿಡಿಗೇಡಿಗಳಿಂದ ಹಲ್ಲೆಗೊಳಗಾದ ವಿದ್ಯಾರ್ಥಿಯಾಗಿದ್ದಾನೆ. ಶಾಕಿರ್ ನೀಡಿದ ದೂರಿನಂತೆ ಕೆಲಿಂಜ ನಿವಾಸಿಗಳಾದ ಚಂದ್ರಶೇಖರ, ಪ್ರಜ್ವಲ್, ರೋಹಿತ್ ಹಾಗೂ ಇತರ 3 ಮೂವರ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -


ಗುರುವಾರ ಕಾಲೇಜಿನಿಂದ KSRTC ಬಸ್ಸಿನಲ್ಲಿ ಮನೆಗೆ ಮರಳುತ್ತಿದ್ದ ವೇಳೆ ವೀರಕಂಬ ಗ್ರಾಮದ ಕೆಲಿಂಜ ತಲುಪಿದಾಗ ಬಸ್ಸಿನಲ್ಲಿದ್ದ ಆರೋಪಿಗಳಾದ ಚಂದ್ರಶೇಖರ, ಪ್ರಜ್ವಲ್, ರೋಹಿತ್ ಹಾಗೂ ಇತರ ಮೂವರು ಹಲ್ಲೆ ನಡೆಸಿದ್ದಾರೆ ಎಂದು ಮಂಗಳೂರಿನ ಬಲ್ಮಠದ ಪದವಿ ಕಾಲೇಜೊಂದರ ವಿದ್ಯಾರ್ಥಿಯಾಗಿರುವ ಶಾಕೀರ್ ದೂರಿನಲ್ಲಿ ತಿಳಿಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.



Join Whatsapp