ಬೆಂಗಳೂರು: ರಾಜ್ಯದಲ್ಲಿ ಪ್ರತಿವರ್ಷದ ವಾಡಿಕೆ ಪ್ರಮಾಣಕ್ಕಿಂತಲೂ ಈ ಬಾರಿ ಹೆಚ್ಚು ಚಳಿ ಇದ್ದು, ಮುಂದಿನ ಒಂದು ವಾರಗಳ ಕಾಲ ಚಳಿ ಹೆಚ್ಚಳ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ದಕ್ಷಿಣ ಒಳನಾಡು, ಮತ್ತು ಉತ್ತರ ಒಳನಾಡಿನ ಅನೇಕ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮತ್ತಷ್ಟು ಚಳಿ ಹೆಚ್ಚಾಗುವ ಸಾಧ್ಯತೆ ಇದೆ.
ಭಾನುವಾರದಿಂದ 6 ದಿನಗಳ ಕಾಲ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಂಜು ಕವಿಯುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಜ.15 ರಿಂದ 19 ರವರೆಗೆ ಕನಿಷ್ಠ ತಾಪಮಾನ 14 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.