ಬಾಯಿ ಹರುಕನಂತೆ ಮಾತನಾಡುವ ನಾಮರ್ಧನಿಗೆ ಅಂತ್ಯ ಹಾಡುವ ಕಾಲ ಬಂದಿದೆ: ಯತ್ನಾಳ್ ವಿರುದ್ಧ ನಿರಾಣಿ ಸಹೋದರ ಕಿಡಿ

Prasthutha|

ಬಾಗಲಕೋಟೆ: ಬಾಯಿ ಹರುಕನಂತೆ ಮಾತನಾಡುವ ನಾಮರ್ಧನಿಗೆ ಅಂತ್ಯ ಹಾಡುವ ಕಾಲ ಬಂದಿದೆ ಎಂದು ಸಚಿವ ಮುರುಗೇಶ ನಿರಾಣಿ ಸಹೋದರ ಸಂಗಮೇಶ ನಿರಾಣಿ, ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ಕಿಡಿಕಾರಿದ್ದಾರೆ.

- Advertisement -

ಈ ಕುರಿತು ಟ್ವೀಟ್‌ ಮಾಡಿರುವ ಅವರು, ಬಾಯಿ ಹರುಕನಂತೆ ಮಾತನಾಡುವ ನಾಮರ್ಧ ನಿನ್ನದೇ ಭಾಷೆಯಲ್ಲಿಯೇ ಉತ್ತರ ನೀಡುತ್ತೇನೆ. ಒಬ್ಬ ಅಪ್ಪನಿಗೆ ಹುಟ್ಟದ ನಿನಗೆ ಅಂತ್ಯ ಹಾಡುವ ಕಾಲ ಬಂದಿದೆ ಎಂದಿದ್ದಾರೆ.

ನೇರ ಕಾದಾಟ ಕಣಕ್ಕೆ ಬಂದರೆ ನಿನ್ನ ತಾಕತ್ತು ತಿಳಿಯುತ್ತದೆ. ರಾಜಕೀಯ ಮರುಜನ್ಮ ಕೊಟ್ಟವರಿಗೆ ರಾಜಕೀಯ ಮರಣ ಶಾಸನ ಬರೆಯುವುದು ಗೊತ್ತಿದೆ ಎಂದು ನಿರಾಣಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ಲಕ್ಷಾಂತರ ಜನರಿಗೆ ಅನ್ನ, ಆಶ್ರಯ, ಜೀವನ ಕೊಟ್ಟ ಧರ್ಮಾತ್ಮ ಮುರುಗೇಶ ನಿರಾಣಿಯವರ ತೇಜೋವಧೆಗೆ ನಿಂತ ಮುಠ್ಠಾಳರಿಗೆ ಕಾಲವೇ ಉತ್ತರ ನೀಡುತ್ತದೆ. ಮುರುಗೇಶ ನಿರಾಣಿ ಎಂಬ ಪ್ರಖರ ಸೂರ್ಯನೆದರು ಇಂತವರು ಭಸ್ಮವಾಗಿದ್ದಾರೆ ನೆನಪಿರಲಿ ಎಂದು ಎಚ್ಚರಿಕೆ ನೀಡಿದ್ದಾರೆ.



Join Whatsapp