ಕೇಂದ್ರ ಸಚಿವರ ಬೆಂಗಾವಲು ವಾಹನ ಪಲ್ಟಿ: ಐವರು ಗಂಭೀರ

Prasthutha|

- Advertisement -

ಬಕ್ಸರ್: ಕೇಂದ್ರ ಸಚಿವ ಅಶ್ವಿನಿ ಕುಮಾರ್ ಚೌಬೆ ಅವರ ಬೆಂಗಾವಲು ವಾಹನ ಪಲ್ಟಿಯಾಗಿ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಿಹಾರದಲ್ಲಿ ನಡೆದಿದೆ.

ರಸ್ತೆ ಅಪಘಾತದಿಂದ ಅವರು ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

- Advertisement -

ಅಪಘಾತದಲ್ಲಿ ಕೊರಂಸರೈ ಪೊಲೀಸ್ ಠಾಣೆಯ ನಾಲ್ವರು ಪೊಲೀಸರು ಮತ್ತು ಅವರೊಂದಿಗೆ ಪ್ರಯಾಣಿಸುತ್ತಿದ್ದ ವಾಹನದ ಚಾಲಕ ಗಂಭೀರ ಗಾಯಗೊಂಡಿದ್ದಾರೆ.

ಕೇಂದ್ರ ಸಚಿವರು ಬಕ್ಸರ್‌ ನಿಂದ ಪಾಟ್ನಾಗೆ ಹೋಗುತ್ತಿದ್ದಾಗ ಅವಘಡ ಸಂಭವಿಸಿದೆ.



Join Whatsapp