ಸ್ಯಾಂಟ್ರೋ ರವಿ ವಂಚನೆ ಪ್ರಕರಣ ಸಿಐಡಿ ತನಿಖೆಗೆ: ಗೃಹ ಸಚಿವ ಆರಗ ಜ್ಞಾನೇಂದ್ರ

Prasthutha|

ಬೆಂಗಳೂರು: ಸ್ಯಾಂಟ್ರೋ ರವಿಯ ವಂಚನೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

- Advertisement -


ವಂಚಕ ಎನ್ನಲಾದ ಸ್ಯಾಂಟ್ರೊ ರವಿ ವಿರುದ್ಧದ ದೂರುಗಳ ಬಗ್ಗೆ ತನಿಖೆ ನಡೆಸಲು ರಾಜ್ಯ ಸರಕಾರ ಸಿಐಡಿ ಪೊಲೀಸರಿಗೆ ನಿರ್ದೇಶನ ನೀಡಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ತಲೆಮರೆಸಿಕೊಂಡಿದ್ದ ಸ್ಯಾಂಟ್ರೋ ರವಿಯನ್ನು ಗುಜರಾತ್’ನ ಅಹಮದಾಬಾದ್’ನಿಂದ ಕಳೆದ ವಾರ ಕರ್ನಾಟಕ ಪೊಲೀಸರು ಬಂಧಿಸಿ ಕರೆತಂದಿದ್ದರು.

- Advertisement -

ಸ್ಯಾಂಟ್ರೋ ರವಿ ಜೊತೆ ಈತನ ಸಹಚರರಾದ ರಾಮ್‌’ಜಿ, ಸತೀಶ್ ಹಾಗೂ ಮಧುಸೂದನ್ ಎಂಬವರನ್ನೂ ಬಂಧಿಸಲಾಗಿದ್ದು, ಇಡೀ ಪ್ರಕರಣ ರಾಜಕೀಯವಾಗಿ ಮಹತ್ವ ಪಡೆದುಕೊಂಡಿರುವುದರಿಂದ ರಾಜ್ಯ ಸರ್ಕಾರ ಪ್ರಕರಣದ ತನಿಖೆಯನ್ನು ಸಿಐಡಿ ಪೊಲೀಸರಿಗೆ ವಹಿಸಲಾಗಿದೆ.

ವಂಚನೆ ಸಂಬಂಧಿಸಿದಂತೆ ಪತ್ನಿ‌ ನೀಡಿದ ದೂರು ನಗರದಲ್ಲಿ ಬಂದಿರುವ ದೂರು ಆರೋಪಗಳು ಸೇರಿದಂತೆ ಎಲ್ಲವನ್ನೂ ಕ್ರೋಢೀಕರಸಿ ಸಿಐಡಿ ಅಧಿಕಾರಿಗಳು ಸ್ಯಾಂಟ್ರೋ ರವಿಯನ್ನು ವಿಚಾರಣೆ ನಡೆಸಿ ಮಾಹಿತಿಯನ್ನು ಸಂಗ್ರಹಿಸಲಿದ್ದಾರೆ.

ವಂಚನೆ ಸಂಬಂಧಿಸಿದಂತೆ ಪತ್ನಿ‌ ನೀಡಿದ ದೂರಿನ ಬೆನ್ನಲ್ಲೇ ಹಲವು ಆರೋಪಗಳು ಕೇಳಿಬಂದ ಬಳಿಕ ಬಂಧನ ಭೀತಿಯಲ್ಲಿ ಗುಜರಾತ್​ನ ಅಹಮದಾಬಾದ್​ನಲ್ಲಿ ತಲೆಮರೆಸಿಕೊಂಡಿದ್ದ ಸ್ಯಾಂಟ್ರೋ ರವಿಯನ್ನು ಕಳೆದ ಜ.13ರಂದು ರಾಜ್ಯ ಪೊಲೀಸರು ಪತ್ತೆ ಮಾಡಿ ಬಂಧಿಸಿ ಮೈಸೂರಿಗೆ ಕರೆತಂದಿದ್ದರು.

ಬಿಗಿ ಭದ್ರತೆಯಲ್ಲಿ ಮೈಸೂರಿನ ವಿಜಯನಗರ ಠಾಣೆಯಿಂದ ವಿವಿ ಮೊಹಲ್ಲಾದಲ್ಲಿರುವ ಜಡ್ಜ್​ ನಿವಾಸಕ್ಕೆ ಕರೆದೊಯ್ದು ನ್ಯಾಯಾಧೀಶರ ಮುಂದೆ ಸ್ಯಾಂಟ್ರೋ ರವಿಯನ್ನು ಹಾಜರುಪಡಿಸಲಾಗಿತ್ತು. ನ್ಯಾಯಾಧೀಶರು,ಆರೋಪಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದ್ದರು. ಅಲ್ಲಿಂದ ಸ್ಯಾಂಟ್ರೋ ರವಿಯನ್ನು ವಶಕ್ಕೆ ತೆಗೆದುಕೊಂಡಿರುವ ಮೈಸೂರು ಪೊಲೀಸರು ವಿಚಾರಣೆ ನಡೆಸಿ‌ ಮಾಹಿತಿಯನ್ನು ಸಂಗ್ರಹಿಸ ತೊಡಗಿದ್ದಾರೆ.

ಮಂತ್ರಾಲಯಕ್ಕೆ ಬಂದಿದ್ದ ಸ್ಯಾಂಟ್ರೋ ರವಿ ಆಪ್ತ ಲಷ್ಮಿತ್ ಅಲಿಯಾಸ್ ಚೇತನ್​ ನನ್ನು ರಾಯಚೂರು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿ ಆತ ನೀಡಿದ ಮಾಹಿತಿಯನ್ನು ಆಧರಿಸಿ ಗುಜರಾತ್​ ನಲ್ಲಿ ತಲೆಮರೆಸಿಕೊಂಡಿದ್ದ ಸ್ಯಾಂಟ್ರೋ ರವಿಯನ್ನು ಕಾರ್ಯಾಚರಣೆ ನಡೆಸಿ ಬಂಧಿಸಲಾಗಿತ್ತು.

ರವಿ ವಿರುದ್ಧ ವರದಕ್ಷಿಣೆ ನಿಷೇಧ ಕಾಯ್ದೆ, ಪರಿಶಿಷ್ಟರ ಮೇಲಿನ ದೌರ್ಜನ್ಯ ನಿಯಂತ್ರಣ ಕಾಯ್ದೆ, ಐಪಿಸಿ 506 (ಉದ್ದೇಶಪೂರ್ವಕ ಅವಹೇಳನ, ಮನಶಾಂತಿ ಕೆಡಿಸುವ ಪ್ರಯತ್ನ), 504 (ಕ್ರಿಮಿನಲ್‌ ಪಿತೂರಿ), 376 (ಅತ್ಯಾಚಾರ), 270 (ಪ್ರಾಣ ಹಾನಿಕರವಾದ ಸೋಂಕು ಹರಡುವ ಯತ್ನ), ಬಲವಂತದ ಗರ್ಭಪಾತ (313) ಹಾಗೂ 323 (ಹಲ್ಲೆ), 498ಎ (ಕೌಟುಂಬಿಕ ದೌರ್ಜನ್ಯ) ಅಡಿ ಪ್ರಕರಣಗಳು ದಾಖಲಾಗಿವೆ.   



Join Whatsapp