ನವದೆಹಲಿ: ಸ್ವತಂತ್ರ ನಿರ್ಧಾರಗಳನ್ನು ಕೈಗೊಳ್ಳುವ ಅಧಿಕಾರ ಲೆಫ್ಟಿನೆಂಟ್ ಗವರ್ನರ್’ಗೆ ಇಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರೀವಾಲ್ ಹೇಳಿದ್ದಾರೆ.
ಎಎಪಿ ಸರ್ಕಾರದ ಕಾರ್ಯ ಚಟುವಟಿಕೆಗಳಲ್ಲಿ ಹಸ್ತಕ್ಷೇಪ ಮಾಡುತ್ತಿರುವ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿರುದ್ಧ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ನೇತೃತ್ವದಲ್ಲಿ ಎಎಪಿ ಶಾಸಕರು ಲೆಫ್ಟಿನೆಂಟ್ ಗವರ್ನರ್ ಕಚೇರಿಗೆ ಸೋಮವಾರ ಮೆರವಣಿಗೆ ನಡೆಸಿ ಪ್ರತಿಭಟನೆ ನಡೆಸಿದರು.
ಈ ವೇಳೆ ಮಾತನಾಡಿದ ಕೇಜ್ರೀವಾಲ್, ಸ್ವತಂತ್ರ ನಿರ್ಧಾರಗಳನ್ನು ತೆಗೆದುಕೊಳ್ಳಲು ಲೆಫ್ಟಿನೆಂಟ್ ಗವರ್ನರ್ ಅಧಿಕಾರವಿಲ್ಲ. ಆದರೂ ವಿ.ಕೆ. ಸಕ್ಸೇನಾ ಅವರು ಅದೇ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.