ನಾಗಾಲ್ಯಾಂಡ್, ಮೇಘಾಲಯ, ತ್ರಿಪುರ ವಿಧಾನಸಭಾ ಚುನಾವಣೆಗೆ ವೇಳಾಪಟ್ಟಿ ಪ್ರಕಟ

Prasthutha|

ನವದೆಹಲಿ: ತ್ರಿಪುರ, ನಾಗಾಲ್ಯಾಂಡ್ ಮತ್ತು ಮೇಘಾಲಯ ವಿಧಾನಸಭಾ ಚುನಾವಣೆಗೆ ವೇಳಾಪಟ್ಟಿ ಪ್ರಕಟಗೊಂಡಿದೆ. ಭಾರತದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ದಿಲ್ಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ವೇಳಾಪಟ್ಟಿ ಪ್ರಕಟಿಸಿದರು.

- Advertisement -


ತ್ರಿಪುರದಲ್ಲಿ ಫೆಬ್ರವರಿ 16ರಂದು ಮತ್ತು ಮೇಘಾಲಯ ಮತ್ತು ನಾಗಾಲ್ಯಾಂಡ್’ಗಳಲ್ಲಿ ಫೆಬ್ರವರಿ 17ರಂದು ಮತದಾನ ನಡೆಯಲಿದೆ.
ಈಗಿಂದಲೇ ಚುನಾವಣಾ ನೀತಿಸಂಹಿತೆ ಜಾರಿಯಾದುದಾಗಿ ಹೇಳಿದ ಅವರು ಶಾಂತಿಯುತ ಚುನಾವಣೆಗೆ ಮನವಿ ಮಾಡಿದರು.

ತ್ರಿಪುರಾದ 60 ವಿಧಾನಸಭಾ ಕ್ಷೇತ್ರಗಳ ಚುನಾವಣೆಗೆ ಜನವರಿ 21ಕ್ಕೆ ಅಧಿಸೂಚನೆ ಹೊರಬೀಳಲಿದೆ. ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ ಜನವರಿ 30. ಜನವರಿ 31ರಂದು ನಾಮಪತ್ರ ಪರಿಶೀಲನೆ, ಫೆಬ್ರವರಿ 2 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಫೆಬ್ರವರಿ 16ರಂದು ಮತದಾನ ನಡೆಯಲಿದೆ. ಮಾರ್ಚ್ 2ರಂದು ಮತ ಎಣಿಕೆ ನಡೆಯಲಿದೆ.

- Advertisement -

ಮೇಘಾಲಯ ಮತ್ತು ನಾಗಲ್ಯಾಂಡ್ ವಿಧಾನಸಭಾ ಕ್ಷೇತ್ರಗಳ ಚುನಾವಣೆಗೆ ಜನವರಿ 31ರಂದು ಅಧಿಸೂಚನೆ ಹೊರಬೀಳಲಿದೆ. ಫೆಬ್ರವರಿ 7 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಫೆ.8 ನಾಮಪತ್ರ ಪರಿಶೀಲನೆ, ಫೆ.10ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಫೆಬ್ರವರಿ 27ರಂದು ಮತದಾನ ಮತ್ತು ಮಾರ್ಚ್ 2ರಂದು ಮತ ಎಣಿಕೆ ನಡೆಯಲಿದೆ.



Join Whatsapp