ಉಳ್ಳಾಲ: ಉಳ್ಳಾಲ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಸಂದೀಪ್ ಹೆಸರಲ್ಲಿ ನಕಲಿ ಇನ್ ಸ್ಟಾಗ್ರಾಂ ಖಾತೆ ತೆರೆದು ಅವರ ಸ್ನೇಹಿತರಲ್ಲಿಯೇ ಹಣಕ್ಕಾಗಿ ಬೇಡಿಕೆ ಇಟ್ಟಿರುವ ವಿಚಾರ ಪತ್ತೆಯಾಗಿದೆ.
ಕಳೆದ ಎರಡು ವರ್ಷಗಳಿಂದ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಇನ್ಸ್ ಪೆಕ್ಟರ್ ಸಂದೀಪ್ ಅವರ ಹೆಸರಿನಲ್ಲಿ ಇನ್ ಸ್ಟಾಗ್ರಾಂ ಖಾತೆ ತೆರೆದು ಅವರ ಸ್ನೇಹಿತರಿಂದಲೇ ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾರೆ. ವಿಶೇಷ ಎಂದರೆ ನಕಲಿ ಖಾತೆ ತೆರೆದ ವ್ಯಕ್ತಿಗಳು ಸಂದೀಪ್ ಅವರ ಇನ್ ಸ್ಟಾಗ್ರಾಂ ನ ಬಹುತೇಕ ಸ್ನೇಹಿತರಲ್ಲಿ ಏನೇನೋ ಕಾರಣ ಹೇಳಿ 7,500 ರೂಪಾಯಿ ಸಾಲ ಕೇಳಿದ್ದಾನೆ.
ಇನ್ನು ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಉಳ್ಳಾಲ ಪೊಲೀಸ್ ಇನ್ ಸ್ಪೆಕ್ಟರ್ ಸಂದೀಪ್ ಜಿ.ಎಸ್., ಬುಧವಾರ ಬೆಳಿಗ್ಗೆ ಗೆಳೆಯರು ಕರೆ ಮಾಡಿ ಇನ್ ಸ್ಟಾಗ್ರಾಂನಲ್ಲಿ ಹಣದ ಬೇಡಿಕೆ ಮೆಸೇಜ್ ಬಂದಿರುವುದಾಗಿ ತಿಳಿಸಿದ್ದಾರೆ.ಈ ವಂಚನೆ ಜಾಲವನ್ನು ಪತ್ತೆ ಹಚ್ಚಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.