ವೆಲ್ಲಿಂಗ್ಟನ್: ಪ್ರಧಾನಿ ಹುದ್ದೆಗೆ ನ್ಯಾಯ ಸಲ್ಲಿಸಲು ಸಾಧ್ಯವಾಗುತ್ತಿಲ್ಲ ಒಂದು ನ್ಯೂಜಿಲೆಂಡ್ ಪ್ರಧಾನಿ ಜೆಸಿಂದಾ ಆರ್ಡೆನ್ ಅವರು ತಮ್ಮ ಪಕ್ಷದ ಸಭೆಯಲ್ಲಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ಪಕ್ಷದ ಸದಸ್ಯರು ಅಚ್ಚರಿ ಹೆಚ್ಚಿಸಿದ ಜೆಸಿಂದಾ ಅವರು, ಇದು ಬಹು ದೊಡ್ಡ ಜವಾಬ್ದಾರಿ. ನನಗೆ ಯಾಕೋ ಪ್ರಜೆಗಳಿಗೆ ನ್ಯಾಯ ಒದಗಿಸಲು ಆಗುತ್ತಿಲ್ಲ ಎನಿಸಿದೆ. ಮಾನಸಿಕವಾಗಿ ಗೊಂದಲಗೊಂಡು ಈ ದೊಡ್ಡ ಹುದ್ದೆಯಲ್ಲಿ ಮುಂದುವರಿಯುವುದು ಸರಿಯಲ್ಲ ಎನಿಸುತ್ತದೆ ಎಂದು ಅವರು ಹೇಳಿದರು.
ಪ್ರಧಾನಿ ಹುದ್ದೆಗೆ ಸೂಕ್ತ ವ್ಯಕ್ತಿ ಇದ್ದರೆ ಚೆನ್ನಾಗಿತ್ತು. ನನಗೆ ಪ್ರಧಾನಿ ಹುದ್ದೆ ನಿಭಾಯಿಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ರಾಜೀನಾಮೆ ನೀಡುತ್ತಿದ್ದೇನೆ ಎಂದು ಜೆಸಿಂದಾ ಹೇಳಿದ್ದಾರೆ.