ಮೊರಾದಾಬಾದ್: ಉತ್ತರ ಪ್ರದೇಶದ ಮೊರಾದಾಬಾದ್ ಪಟ್ಟಣದ ಕಾಲೇಜೊಂದರಲ್ಲಿ ಸ್ಕಾರ್ಫ್ ಧರಿಸಿದ ಮುಸ್ಲಿಮ್ ವಿದ್ಯಾರ್ಥಿನಿಯರಿಗೆ ತರಗತಿ ಪ್ರವೇಶ ನಿರಾಕರಿಸಲಾಗಿದೆ. ಕಾಲೇಜು ಆಡಳಿತ ಮಂಡಳಿಯ ಈ ನಿರ್ಧಾರದ ವಿರುದ್ಧ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ್ದಾರೆ.
ಹಿಜಾಬ್ ಧರಿಸಲು ಅವಕಾಶ ನೀಡುವಂತೆ ವಿದ್ಯಾರ್ಥಿನಿಯರು ಕಾಲೇಜು ಗೇಟ್ ಮುಂಭಾಗ ಧರಣಿ ನಡೆಸಿ, ಘೋಷಣೆ ಕೂಗಿದರು. ವಿದ್ಯಾರ್ಥಿನಿಯರ ಧರಣಿಗೆ ಎಸ್.ಪಿ. ಮುಖಂಡ, ಮಾಜಿ ಶಾಸಕ ಝಮೀರುಲ್ಲಾ ಬೆಂಬಲ ಸೂಚಿಸಿದ್ದಾರೆ.
ಹಿಜಾಬ್ ವಿಷಯದಲ್ಲಿ ವಿದ್ಯಾರ್ಥಿಗಳು, ಸಮಾಜವಾದಿ ಛಾತ್ರ ಸಭಾ ಕಾರ್ಯಕರ್ತರು ಮತ್ತು ಕಾಲೇಜು ಪ್ರಾಧ್ಯಾಪಕರ ನಡುವೆ ವಾಗ್ವಾದ ನಡೆದಿದೆ. ಈ ವೀಡಿಯೊ ಅಂತರ್ಜಾಲದಲ್ಲಿ ವೈರಲ್ ಆಗಿದೆ.
ಈ ಮಧ್ಯೆ ಕಾಲೇಜು ಪ್ರಾಧ್ಯಾಪಕ ಡಾ.ಎ ಪಿ ಸಿಂಗ್ ಅವರು ಇಲ್ಲಿನ ವಿದ್ಯಾರ್ಥಿಗಳಿಗೆ ಡ್ರೆಸ್ ಕೋಡ್ ಅನ್ನು ಜಾರಿಗೆ ತರಲಾಗಿದೆ. ಅದನ್ನು ಪಾಲಿಸಬೇಕು, ಇಲ್ಲದಿದ್ದರೆ ಕಾಲೇಜು ಕ್ಯಾಂಪಸ್’ಗೆ ಪ್ರವೇಶಿಸದಂತೆ ನಿರ್ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.
ಕಳೆದ ವರ್ಷ ಕರ್ನಾಟಕದಲ್ಲೂ ಹಿಜಾಬ್ ವಿವಾದ ಭುಗಿಲೆದ್ದಿತ್ತು. ಹಿಜಾಬ್ ಹೆಸರಿನಲ್ಲಿ ಮುಸ್ಲಿಮ್ ವಿದ್ಯಾರ್ಥಿನಿಯರ ಶಿಕ್ಷಣಕ್ಕೆ ಅಡ್ಡಿಪಡಿಸಲಾಗಿತ್ತು.