ಬೆಂಗಳೂರು: ಫೆಬ್ರವರಿ 10ರಿಂದ ಬಜೆಟ್ ಅಧಿವೇಶನ ಆರಂಭಗೊಳ್ಳಲಿದ್ದು, ಫೆ. 17ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಜೆಟ್ ಮಂಡನೆ ಮಾಡಲಿದ್ದಾರೆ ಎಂದು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದ್ದಾರೆ.
ಸಚಿವ ಸಂಪುಟ ಸಭೆಯ ಬಳಿಕ ಸಭೆಯ ವಿವರ ನೀಡಿದ ಅವರು, ಫೆ.10ಕ್ಕೆ ವಿಧಾನಸಭೆಯ ಜಂಟಿ ಅಧಿವೇಶನ ಆರಂಭಗೊಳ್ಳಲಿದೆ. 10ರಂದು ರಾಜ್ಯಪಾಲರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. 17 ಕ್ಕೆ ಸಿಎಂ ಬೊಮ್ಮಾಯಿ ಬಜೆಟ್ ಮಂಡನೆ ಮಾಡಲಿದ್ದಾರೆ. ಎಷ್ಟು ದಿವಸ ಅಧಿವೇಶನ ಮಾಡಬೇಕು ಎನ್ನುವುದು ಬಿಎಸ್’ಇನಲ್ಲಿ ತೀರ್ಮಾನ ಮಾಡಲಾಗುತ್ತದೆ ಎಂದರು.
ಬಾಲ್ಯ ವಿವಾಹ ತಡೆಗೆ ಹೊಸ ಕಾರ್ಯಕ್ರಮ ಜಾರಿಗೆ ತರಲಾಗಿದೆ. ಸ್ಫೂರ್ತಿ ಯೋಜನೆ ಮೂಲಕ ಹೆಣ್ಣು ಮಕ್ಕಳಿಗೆ ಕೌಶಲ್ಯಾಧರಿತ ಶಿಕ್ಷಣ ನೀಡಲಾಗುವುದು. ಒಟ್ಟು 12.51 ಕೋಟಿ ಕೋಟಿ ಅನುದಾನ ಇದಕ್ಕಾಗಿ ಮೀಸಲಿಡಲಾಗಿದೆ ಎಂದು ಸಚಿವರು ತಿಳಿಸಿದರು.