ಮಂಗಳೂರು: ಇತ್ತೀಚೆಗೆ ಸುರತ್ಕಲ್’ನ ಕಾಟಿಪಳ್ಳದಲ್ಲಿ ಸಂಘಪರಿವಾರದ ಕಾರ್ಯಕರ್ತರಿಂದ ಹತ್ಯೆಗೀಡಾದ ಜಲೀಲ್ ಕುಟುಂಬಕ್ಕೆ ಕಾಂಗ್ರೆಸ್ ಮುಖಂಡ ಪ್ರಿಯಾಂಕ್ ಖರ್ಗೆ ಅವರು 1 ಲಕ್ಷ ರೂ. ಚೆಕ್ ವಿತರಿಸಿದ್ದಾರೆ.
ಜಲೀಲ್ ಮನೆಗೆ ಭೇಟಿ ನೀಡಿದ ಪ್ರಿಯಾಂಕ್ ಖರ್ಗೆ ಮಾಜಿ ಶಾಸಕ ಬಿ.ಎ. ಮೊಯಿದೀನ್ ಬಾವಾ ಅವರು ವೈಯಕ್ತಿಕ ನೆಲೆಯಲ್ಲಿ ನೀಡಿದ 1 ಲಕ್ಷ ರೂ. ಮೊತ್ತದ ಚೆಕ್ ಹಸ್ತಾಂತರಿಸಿ ಸಾಂತ್ವನ ಹೇಳಿದರು.
ಈ ಹಿಂದೆ ಸುರತ್ಕಲ್ ನಲ್ಲಿ ನಡೆದ ಫಾಝಿಲ್ ಹತ್ಯೆಯ ಬಗ್ಗೆ ಪ್ರಿಯಾಂಕ್ ಗೆ ವಿವರಣೆ ನೀಡಿದ ಮೊಯ್ದೀನ್ ಬಾವಾ ಹತ್ಯೆ ಆರೋಪಿಗಳು ಮೂರೇ ತಿಂಗಳಲ್ಲಿ ಜಾಮೀನು ಪಡೆದು ಹೊರಬಂದಿದ್ದಾರೆ. ಇದಕ್ಕೆ ಬಿಜೆಪಿ ಸರ್ಕಾರವೇ ಕಾರಣ ಎಂದು ಆರೋಪಿಸಿದರು.