ಬಾಂಬ್ ಬೆದರಿಕೆ ಹಿನ್ನೆಲೆ: ಗೋವಾಕ್ಕೆ ತೆರಳುತ್ತಿದ್ದ ವಿಮಾನದ ಮಾರ್ಗ ಬದಲಾವಣೆ

Prasthutha|

ಪಣಜಿ: ರಷ್ಯಾದ ರಾಜಧಾನಿ ಮಾಸ್ಕೋದಿಂದ 240 ಪ್ರಯಾಣಿಕರೊಂದಿಗೆ ಗೋವಾಕ್ಕೆ ತೆರಳುತ್ತಿದ್ದ ಚಾರ್ಟರ್ಡ್ ವಿಮಾನದಲ್ಲಿ ಬಾಂಬ್ ಇಡಲಾಗಿದೆ ಎಂಬ ಬೆದರಿಕೆಯ ಹಿನ್ನೆಲೆಯಲ್ಲಿ ಅದನ್ನು ಶನಿವಾರ ಮುಂಜಾನೆ ಉಜ್ಬೇಕಿಸ್ತಾನಕ್ಕೆ ತಿರುಗಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

ದಕ್ಷಿಣ ಗೋವಾದ ದಬೋಲಿಮ್ ವಿಮಾನ ನಿಲ್ದಾಣದಲ್ಲಿ ಬೆಳಗ್ಗೆ 4.15ಕ್ಕೆ ವಿಮಾನ ಲ್ಯಾಂಡ್ ಆಗಬೇಕಿತ್ತು.

ಅಜುರ್ ಏರ್ ಸಂಸ್ಥೆಯ ಈ ವಿಮಾನ ಭಾರತೀಯ ವಾಯುಪ್ರದೇಶವನ್ನು ಪ್ರವೇಶಿಸುವ ಮೊದಲು ಮಾರ್ಗ ಬದಲಾವಣೆ ಮಾಡಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

ವಿಮಾನದಲ್ಲಿ ಬಾಂಬ್ ಇಡಲಾಗಿದೆ ಎಂಬ ಬೆದರಿಕೆ ಬಂದಿರುವ ಕುರಿತು, ಡಾಬೋಲಿಮ್ ವಿಮಾನ ನಿಲ್ದಾಣದ ನಿರ್ದೇಶಕರಿಂದ 12.30ಕ್ಕೆ ಇಮೇಲ್ ಮೂಲಕ ಮಾಹಿತಿ ದೊರೆತಿತ್ತು. ಈ ಹಿನ್ನೆಲೆಯಲ್ಲಿ 240 ಪ್ರಯಾಣಿಕರಿದ್ದ ವಿಮಾನವನ್ನು ಬೇರೆಡೆಗೆ ತಿರುಗಿಸಲಾಗಿದೆ ಎಂದು ಅಧಿಕಾರಿ ಹೇಳಿದರು.

ಇದಕ್ಕೂ ಮೊದಲು ಇದೇ ರೀತಿಯ ಘಟನೆ ವರದಿಯಾಗಿತ್ತು. ಬಾಂಬ್ ಬೆದರಿಕೆಯ ಹಿನ್ನೆಲೆಯಲ್ಲಿ ಕಳೆದ ಎರಡು ವಾರಗಳ ಹಿಂದೆ ಮಾಸ್ಕೋದಿಂದ ಆಗಮಿಸಿದ್ದ ವಿಮಾನವನ್ನು ಗೋವಾ ಬದಲು ಗುಜರಾತ್’ನ ಜಾಮ್’ನಗರದ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿಸಲಾಗಿತ್ತು.   



Join Whatsapp