ಮಂಗಳೂರು: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಇಂದಿನಿಂದ ಎರಡು ದಿನ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ. ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ. ಇನ್ನು 48 ಗಂಟೆಗಳಲ್ಲಿ ಕನಿಷ್ಠ ಉಷ್ಣಾಂಶವು ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2 ರಿಂದ 3 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡಕವಿದ ವಾತಾವರಣವಿರಲಿದೆ, ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕಿದ ವಾತಾವರಣವಿರಲಿದೆ.