ಬೆಳ್ಮಣ್: ಅಣ್ಣನೊಬ್ಬ ತಮ್ಮನ ಮನೆಗೆ ಬೆಂಕಿ ಹಚ್ಚಿ ತಾನೂ ಕಾರಿನೊಳಗೆ ಪೆಟ್ರೋಲ್ ಸುರಿದು ದಹನವಾದ ಘಟನೆ ಕಾರ್ಕಳ ತಾಲೂಕಿನ ಸಚ್ಚರೀಪೇಟೆಯಲ್ಲಿ ನಡೆದಿದೆ.
ಮುಂಡ್ಕೂರು ಗ್ರಾಮದ ಸಚ್ಚರೀಪೇಟೆ ಕುದ್ರುಟ್ಟು ನಿವಾಸಿ ಕೃಷ್ಣ ಕುಲಾಲ್ (46) ಕೃತ್ಯ ಎಸಗಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ಕೃಷ್ಣ ಕುಲಾಲ್ ವೃತ್ತಿಯಲ್ಲಿ ಕಾರು ಚಾಲಕನಾಗಿದ್ದು. ತನ್ನ ಮಾರುತಿ ಒಮಿನಿ ಕಾರಿನ ಒಳಗೆ ಕುಳಿತು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಕೃಷ್ಣ ಕುಲಾಲ್ ಎಂಬಾತ ತನ್ನ ತಮ್ಮ ಶೇಖರ ಕುಲಾಲ್ ಎಂಬವರ ಮನೆಗೆ ತಡರಾತ್ರಿ 3 ಗಂಟೆಗೆ ಬೆಂಕಿಯಿಟ್ಟು ತಾನು ತನ್ನ ಒಮಿನಿಯಲ್ಲಿ ಕುಳಿತು ಅದಕ್ಕೂ ಬೆಂಕಿ ಹಾಕಿ ತಾನೂ ಸುಟ್ಟು ಭಸ್ಮವಾಗಿದ್ದಾನೆ. ಜಮೀನು ವಿವಾದ ಈ ಘಟನೆಗೆ ಕಾರಣ ಎನ್ನಲಾಗುತ್ತಿದೆ.
ಈ ಬಗ್ಗೆ ಕಾರ್ಕಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.