ಪುತ್ತೂರು: ಎಸ್’ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ 74 ನೇ ವರ್ಷದ ಗಣರಾಜ್ಯೋತ್ಸವ ದಿನಾಚರಣೆ ನಡೆಸಲಾಯಿತು.
ಎಸ್ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾದ ಹಾಜಿ ಇಬ್ರಾಹಿಂ ಸಾಗರ್ ಧ್ವಜಾರೋಹಣಗೈದು ಪ್ರಾಸ್ತಾವಿಕ ಮಾತುಗಳನ್ನಾಡಿದರು.
ಎಸ್’ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಉಪಾಧ್ಯಕ್ಷರಾದ ಅಬ್ದುಲ್ ಹಮೀದ್ ಸಾಲ್ಮರ ಸಂದೇಶ ಭಾಷಣ ಮಾಡಿ ದೇಶದೆಲ್ಲೆಡೆ ಗಣರಾಜ್ಯವು ಅಪಾಯದಲ್ಲಿದೆ, ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರ ಸಂವಿಧಾನವನ್ನು ಉಳಿಸಲು ಪ್ರತಿಯೊಬ್ಬರು ಪಣತೊಟ್ಟು ಗಣರಾಜ್ಯದ ಸಂರಕ್ಷಕರಾಗಬೇಕೆಂದು ಕರೆ ನೀಡಿದರು.
ಎಸ್ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಸ್ವಾಗತಿಸಿ ನಿರೂಪಿಸಿದರು. ಕೋಶಾಧಿಕಾರಿ ಯಹ್ಯಾ ಕೂರ್ನಡ್ಕ ವಂದಿಸಿದರು ,ಕಾರ್ಯಕ್ರಮದಲ್ಲಿ ಹಲವಾರು ಕಾರ್ಯಕರ್ತರು ಉಪಸ್ಥಿತರಿದ್ದರು.