ಅಮಿತ್ ಶಾ ಭಾವಚಿತ್ರ ಸುಟ್ಟು ‘ಗೋ ಬ್ಯಾಕ್’ ಘೋಷಣೆ ಕೂಗಿದ ಹೋರಾಟಗಾರರು

Prasthutha|

ಹುಬ್ಬಳ್ಳಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಕಳಸಾ ಬಂಡೂರಿ ರೈತ ಹೋರಾಟ ಸಮಿತಿ ಸದಸ್ಯರು ಗೃಹ ಸಚಿವ ಅಮಿತ್ ಶಾ ಅವರ ಭಾವಚಿತ್ರ ಸುಟ್ಟು ‘ಗೋ ಬ್ಯಾಕ್’ ಘೋಷಣೆ ಕೂಗಿದ ಘಟನೆ ಶನಿವಾರ ನಡೆದಿದೆ.

- Advertisement -


ಅಲ್ಲದೆ, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.


ಸಮಿತಿ ಅಧ್ಯಕ್ಷ ಸಿದ್ದುತೇಜಿ ಮಾತನಾಡಿ, ‘ಸ್ವಾಮಿನಾಥನ್ ಆಯೋಗದ ವರದಿ ಜಾರಿ ಮಾಡುವುದರಿಂದ ರೈತರಿಗೆ ಅನುಕೂಲವಾಗಲಿದೆ. ಬೆಳೆಗೆ ಬೆಂಬಲ ಬೆಲೆ ಇಲ್ಲದೆ ರೈತರು ಸಂಕಷ್ಟ ಅನುಭವಿಸುತ್ತಿದ್ದಾರೆ. ಬಿಜೆಪಿ ನಾಯಕರು ಮಹದಾಯಿ ಯೋಜನೆಯ ಡಿಪಿಆರ್’ಗೆ ಒಪ್ಪಿಗೆ ಸಿಕ್ಕಿದೆ ಎಂದು ಜನರ ದಿಕ್ಕು ತಪ್ಪಿಸುತ್ತಿದ್ದಾರೆ. ಅರಣ್ಯ ಇಲಾಖೆಯಿಂದ ಈವರೆಗೂ ಅನುಮತಿ ದೊರೆತಿಲ್ಲ. ಕೃಷ್ಣಾ ನದಿಯ ಎಡದಂಡೆ ಯೋಜನೆ ಕಾಮಗಾರಿ ಸ್ಥಗಿತಗೊಂಡಿದೆ. ಕೇಂದ್ರ ಸರ್ಕಾರ ಅನುದಾನ ನೀಡುತ್ತಿಲ್ಲ. ಅತಿವೃಷ್ಟಿ, ಅನಾವೃಷ್ಟಿಯಿಂದ ರೈತರು ಸಮಸ್ಯೆ ಅನುಭವಿಸುತ್ತಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.



Join Whatsapp