ಶರಣ್ ಪಂಪ್’ವೆಲ್ ಹೇಳಿಕೆ ಆಘಾತಕಾರಿ, ತಕ್ಷಣ ಬಂಧಿಸಿ: ಅಕ್ಷಿತ್ ಸುವರ್ಣ ಒತ್ತಾಯ

Prasthutha|

ಮಂಗಳೂರು: ಪ್ರವೀಣ್ ನೆಟ್ಟಾರ್ ಕೊಲೆಗೆ ಪ್ರತಿಕಾರವಾಗಿ ಸುರತ್ಕಲ್’ನಲ್ಲಿ ಫಾಝಿಲ್ ಕೊಲೆ ನಡೆಸಿದ್ದೇವೆ ಎಂದು ಸಂಘಪರಿವಾರದ ಅಂಗ ಸಂಘಟನೆಯಾದ ವಿಎಚ್’ಪಿ ನಾಯಕ ಶರಣ್ ಪಂಪ್’ವೆಲ್ ನೀಡಿರುವ ಹೇಳಿಕೆ ನಾಗರಿಕ ಸಮಾಜಕ್ಕೆ ಆಘಾತಕಾರಿ ವಿಚಾರವಾಗಿದೆ ಎಂದು ದ.ಕ. ಜಿಲ್ಲಾ ಯುವ ಜೆಡಿಎಸ್ ಅಧ್ಯಕ್ಷ ಅಕ್ಷಿತ್ ಸುವರ್ಣ ಆತಂಕ ವ್ಯಕ್ತಪಡಿಸಿದ್ದಾರೆ.

- Advertisement -

ಓರ್ವ ಹಿಂದೂ ಮುಖಂಡನಾಗಿ ಇಂತಹ ಹೇಳಿಕೆ ನ್ಯಾಯ ವ್ಯವಸ್ಥೆಗೆ ಎಸೆದಿರುವ ಸವಾಲಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯ ‘ಕ್ರಿಯೆಗೆ ತಕ್ಕ ಪ್ರತಿಕ್ರಿಯೆ’ ಎಂಬ ಹೇಳಿಕೆಗೆ ನೇರವಾಗಿ ಬೆಂಬಲಿಸಿದಂತಾಗಿದ್ದು ಅಮಾಯಕರನ್ನು ಕೊಲ್ಲುವುದೇ ಇವರ ಹಿಡನ್ ಅಜೆಂಡಾ ಆಗಿದೆ.  ಸಾರ್ವಜನಿಕ ಸಭೆಯಲ್ಲಿ ಭಯ ಹುಟ್ಟಿಸುವಂತಹ ಹೇಳಿಕೆಗಳನ್ನು ನೀಡಿದ ವ್ಯಕ್ತಿಯ ವಿರುದ್ದ ಪೊಲೀಸ್ ಇಲಾಖೆ ಕಣ್ಣಿದ್ದು ಕುರುಡರಂತೆ ವರ್ತಿಸುವುದು ನಾಚಿಕೆಗೇಡಿನ ಸಂಗತಿಯಾಗಿದೆ. ಇವರ ಇಂತಹ ಹೇಳಿಕೆಗಳು ನಾಗರಿಕ ಸಮಾಜ ತಲೆ ಭಾಗಿಸುವಂತಹ ಕೆಲಸ ಕೇಂದ್ರ ಸರಕಾರ ಮಾಡಿದೆ ಎಂದರು.

ಶರಣ್ ಅವರ ಹೇಳಿಕೆ ಸಮಾಜದಲ್ಲಿ ಹತ್ಯೆ ಹಾಗೂ ಘರ್ಷಣೆಗೆ ಪ್ರಚೋದನೆ ನೀಡುವಂತಿದ್ದು ಇಂದು ಅಮಾಯಕ ಯುವಕರನ್ನು ಇಂತಹ ಸಮಾಜದ್ರೋಹಿ ಕೆಲಸಗಳಿಗೆ ಬಳಸಿಕೊಂಡು ಚುನಾವಣೆ ಹತ್ತಿರವಿರುವ ಸಮಯದಲ್ಲಿ ಸಮುದಾಯಗಳ ನಡುವೆ ದ್ವೇಷ ಸೃಷ್ಟಿಸುವ ಕೆಲಸ ಮಾಡಲು ಕಾರಣವಾಗುತ್ತಿದೆ. ಇದಕ್ಕೆ ಅವಕಾಶ ನೀಡದೆ ಇಂತಹ ಹೇಳಿಕೆ ನೀಡಿರುವ ಶರಣ್ ಪಂಪ್ವೆಲ್ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಬೇಕು ಎಂದು ಸುವರ್ಣ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.



Join Whatsapp