ಬಳ್ಳಾರಿ: ಬಳ್ಳಾರಿಯಲ್ಲಿ ಪುರಾತತ್ವ ಇಲಾಖೆ ಕಚೇರಿಯ ಮೂವರು ಅಧಿಕಾರಿಗಳು ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಘಟನೆ ನಡೆದಿದೆ.
ಸಿಬಿಐ ಕೈಗೆ ಸಿಕ್ಕಿ ಬಿದ್ದ ಆರೋಪಿಗಳನ್ನು ಪ್ರಶಾಂತ್ ರೆಡ್ಡಿ, ಯೋಗೀಶ್, ಮೊಹ್ಮದ್ ಗೌಸ್ ಎಂದು ಗುರುತಿಸಲಾಗಿದೆ. ಪುರಾತತ್ವ ಇಲಾಖೆಯಿಂದ ಎನ್ ಓ ಸಿ ನೀಡಲು ಅಧಿಕಾರಿಗಳು ರೂ. 1,50,000 ಗಳಿಗೆ ಬೇಡಿಕೆಯಿಟ್ಟಿದ್ದರು ಎನ್ನಲಾಗಿದೆ.
ಸಾಮಾಜಿಕ ಹೋರಾಟಗಾರ ರಾಜಶೇಖರ್ ಮುಲಾಲಿ ಕೇಂದ್ರ ತನಿಖಾ ದಳಕ್ಕೆ ಈ ಕುರಿತು ದೂರು ನೀಡಿದ್ದರು. ಈ ಮಾಹಿತಿಯನ್ನು ಆಧರಿಸಿ ಸಿಬಿಐ ದಾಳಿ ನಡೆಸಿದೆ.