ಟರ್ಕಿ: ಅತ್ಯಂತ ಭೀಕರ ಭೂಕಂಪದಿಂದ ತತ್ತರಿಸಿದ ಟರ್ಕಿ ಮತ್ತು ಸಿರಿಯಾದಲ್ಲಿ ದಿನದಿಂದ ದಿನಕ್ಕೆ ಸಾವಿನ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಇದುವರೆಗೆ ಮೃತಪಟ್ಟವರ ಸಂಖ್ಯೆ 21 ಸಾವಿರಕ್ಕೆ ಏರಿಕೆಯಾಗಿದೆ.
ಸೋಮವಾರದಂದು ರಿಕ್ಟರ್ ಮಾಪಕದಲ್ಲಿ 7.8 ತೀವ್ರತೆಯ ಭೂಕಂಪ ಸಂಭವಿಸಿತ್ತು. ಸಾವಿರಾರು ಮನೆಗಳು, ಕಟ್ಟಡಗಳು ನೆಲಸಮವಾಗಿವೆ. ಬದುಕುಳಿದವರನ್ನು ಹುಡುಕಲು ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಭೂಕಂಪದಿಂದ ಟರ್ಕಿಯಲ್ಲಿ ಸುಮಾರು 13.5 ಮಿಲಿಯನ್ ಜನರ ಬದುಕಿಗೆ ತೊಂದರೆಯಾಗಿದೆ.