ಕರ್ನಾಟಕ ವಿಧಾನಸಭೆ ಚುನಾವಣೆ 2023: ಅಭ್ಯರ್ಥಿಗಳ ಹುಡುಕಾಟದಲ್ಲಿ ಕಾಂಗ್ರೆಸ್

Prasthutha|

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ ಆಡಳಿತ ವಿರೋಧಿ ಅಲೆಯನ್ನು ಮತಗಳಾಗಿ ಪರಿವರ್ತಿಸಿ ಕ್ಷೇತ್ರ ಗೆಲ್ಲಲು ತಂತ್ರಗಾರಿಕೆ ರೂಪಿಸಿರುವ ಕಾಂಗ್ರೆಸ್ ಮುಖಂಡರು, ಹಲವು ಕ್ಷೇತ್ರಗಳಿಗೆ ಇನ್ನೂ ಸೂಕ್ತ ಅಭ್ಯರ್ಥಿಯ ಹುಡುಕಾಟದಲ್ಲಿದ್ದಾರೆ.

- Advertisement -


ವಿಧಾನಸಭೆ ಚುನಾವಣೆಗೆ ಕನಿಷ್ಠ 150 ಕ್ಷೇತ್ರಗಳಿಗೆ ಸಂಭವನೀಯ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿ ಕೇಂದ್ರ ಚುನಾವಣಾ ಸಮಿತಿಗೆ ಸಲ್ಲಿಸಲು ರಾಜ್ಯ ಕಾಂಗ್ರೆಸ್ ನಾಯಕರಿಗೆ ಹಲವು ಸವಾಲುಗಳು ಎದುರಾಗಿವೆ.


ಕೆಲವು ಕ್ಷೇತ್ರಗಳಲ್ಲಿ ಟಿಕೆಟ್ಗಾಗಿ ಅಭ್ಯರ್ಥಿಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿರುವುದು ತಲೆನೋವಾಗಿ ಪರಿಣಮಿಸಿದ್ದು, ಭಿನ್ನಮತ ಸರಿಪಡಿಸದೇ ಇದ್ದಲ್ಲಿ ಮತಗಳು ಚದುರಿ ಹೋಗುವ ಆತಂಕದಲ್ಲಿ ಕಾಂಗ್ರೆಸ್ ನಾಯಕರಿದ್ದಾರೆ.

- Advertisement -


ಕಾಂಗ್ರೆಸ್ ಪರಿಶೀಲನಾ (ಸ್ಕ್ರೀನಿಂಗ್) ಸಮಿತಿ ರಚನೆಯಾಗಿದ್ದರೂ ಟಿಕೆಟ್ ಆಕಾಂಕ್ಷಿಗಳನ್ನು ಅಳೆದುತೂಗಿ, ಪಟ್ಟಿ ಸಿದ್ಧಪಡಿಸಲು ರಾಜ್ಯ ಕಾಂಗ್ರೆಸ್ ನಾಯಕರು ಹರಸಾಹಸ ಪಡುತ್ತಿದ್ದಾರೆ.


ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕರೊಬ್ಬರು, ‘ಕಾಂಗ್ರೆಸ್ ತ್ಯಜಿಸಿ ಬಿಜೆಪಿ ಸೇರಿ ಸಚಿವರಾದ ಶಾಸಕರು, ಪಕ್ಷದ ತಳಮಟ್ಟದ ಕಾರ್ಯಕರ್ತರನ್ನೂ ತಮ್ಮ ಜೊತೆ ಕರೆದೊಯ್ದಿದ್ದಾರೆ. ಈ ಕ್ಷೇತ್ರಗಳಲ್ಲಿ ಸೂಕ್ತ ಅಭ್ಯರ್ಥಿ ಇಲ್ಲದಿರುವುದು ಬಹುದೊಡ್ಡ ಹಿನ್ನಡೆಯಾಗಿದೆ. ಕಳೆದ ಚುನಾವಣೆಯಲ್ಲಿ ಸ್ಪರ್ಧಿಸಿರುವ ಕೆಲವು ಅಭ್ಯರ್ಥಿಗಳು ಈ ಬಾರಿ ಸ್ಪರ್ಧಿಸಲು ಹಿಂದೇಟು ಹಾಕುತ್ತಿದ್ದಾರೆ ಎಂದು ಹೇಳಿದರು.



Join Whatsapp