ಕೊಡಗು: ಹುಲಿ ದಾಳಿಗೆ 12 ವರ್ಷದ ಬಾಲಕ ಬಲಿ

Prasthutha|

ಕೊಡಗು: 12 ವರ್ಷದ ಬಾಲಕನ ಮೇಲೆ ಹುಲಿ ದಾಳಿ ಮಾಡಿದ್ದು, ಸ್ಥಳದಲ್ಲೇ ಬಾಲಕ ಸಾವನ್ನಪ್ಪಿದ ಘಟನೆ ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಕುಟ್ಟ ಗ್ರಾಮದಲ್ಲಿ ನಡೆದಿದೆ.

- Advertisement -

ಚೇತನ್ ಮೃತ ಬಾಲಕ. ದಾಳಿ ಮಾಡಿದ ಹುಲಿ ಬಾಲಕನನ್ನು ಕೊಂದು ತೊಡೆ ಭಾಗವನ್ನು ತಿಂದಿದೆ ಎನ್ನಲಾಗುತ್ತಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಕುಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕೆರೆಯಲ್ಲಿ ಹುಲಿ ಮೃತದೇಹ ಪತ್ತೆ

- Advertisement -

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದ ಹೊರವಲಯದ ಮಲ್ಲಯ್ಯನಕಟ್ಟೆ ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಹುಲಿ ಮೃತದೇಹ ಪತ್ತೆಯಾಗಿದೆ. ಕೆರೆಯಲ್ಲಿ ದನಗಳಿಗೆ ನೀರು ಕುಡಿಸಲು ಹೋಗಿದ್ದ ರೈತರೊಬ್ಬರಿಗೆ ಹುಲಿಯ ಮೃತದೇಹ ಕೆರೆಯಲ್ಲಿ ತೇಲುತ್ತಿರುವುದು ಕಾಣಿಸಿದೆ. ಕೂಡಲೇ ಅರಣ್ಯಾಧಿಕಾರಿಗಳಿಗೆ ಕರೆ ಮಾಡಿದ್ದು ವಿಷಯ ತಿಳಿದು ಸ್ಥಳಕ್ಕಾಗಮಿಸಿದ್ದಾರೆ.

ಈ ವೇಳೆ ರೈತರು ಅರಣ್ಯಧಿಕಾರಿಗಳನ್ನು ತರಾಟೆ ತೆಗೆದುಕೊಂಡಿದ್ದಾರೆ. “ಚಿರತೆ, ಹುಲಿಗಳು ಜಾನುವಾರುಗಳ ಮೇಲೆ ದಾಳಿ ಮಾಡಿರುವ ಬಗ್ಗೆ ರೈತರು ಹಲವು ಬಾರಿ ದೂರು ನೀಡಿದ್ದರು. ಆದರೆ ರೈತರು ಎಷ್ಟೆ ಬಾರಿ ದೂರು ನೀಡಿದರು ಅಧಿಕಾರಿಗಳು ಸ್ಪಂದಿಸಿಲ್ಲ. ಇದೀಗ ಹುಲಿ ಸಾವನಪ್ಪಿದೆ ಎಂದಾಕ್ಷಣ ತಕ್ಷಣ ಸ್ಥಳಕ್ಕಾಗಮಿಸಿದ್ದೀರಾ….ಮನುಷ್ಯರು ಜಾನುವಾರುಗಳು ಸಾವನನಪ್ಪಿದ್ರೆ ಬೆಲೆ ಇಲ್ವಾ?” ಎಂದು ಗುಂಡ್ಲುಪೇಟೆ ಎಸಿಎಫ್ ರವೀಂದ್ರ, ಆರ್.ಎಫ್ ಓ ಶ್ರೀನಿವಾಸ್ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹುಲಿಯನ್ನ ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ನಂತರ ನಿಖರ ಕಾರಣ ತಿಳಿಯಬೇಕಿದೆ.



Join Whatsapp