ನವದೆಹಲಿ: ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಹಾಗೂ ತಮಿಳುನಾಡಿನ ಸ್ಫೋಟ ಪ್ರಕರಣದ ಸಂಬಂಧ ತನಿಖೆಯನ್ನು ತೀವ್ರಗೊಳಿಸಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್’ಐಎ) ಅಧಿಕಾರಿಗಳು ಕರ್ನಾಟಕ ಸೇರಿ ಮೂರು ರಾಜ್ಯಗಳ ದಾಳಿ ನಡೆಸಿದ್ದಾರೆ.
ಕಳೆದ ವರ್ಷದ ಕೊಯಮುತ್ತೂರು ಹಾಗೂ ಮಂಗಳೂರು ಸ್ಫೋಟ ಪ್ರಕರಣಕ್ಕೆ ಸಂಬಂಧ ಕರ್ನಾಟಕ, ತಮಿಳುನಾಡು ಹಾಗೂ ಕೇರಳ ರಾಜ್ಯಗಳ 60 ಪ್ರದೇಶಗಳ ಮೇಲೆ ಏಕಕಾಲಕ್ಕೆ ಎನ್’ಐಎ ಅಧಿಕಾರಿಗಳು ದಾಳಿ ಮಾಡಿದ್ದು ಕರ್ನಾಟಕದಲ್ಲಿ 40 ಕಡೆಗಳಲ್ಲಿ ದಾಳಿ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಕೇರಳದ ಪಲ್ಲಕಡನಲ್ಲಿ ದಾಳಿ ನಡೆಸಿ ಎಲೆಕ್ಟ್ರಾನಿಕ್ ಡಿವೈಸ್’ಗಳು ಮತ್ತು ಕೆಲವು ದಾಖಲೆಗಳನ್ನು ವಶಪಡಿಸಿಕೊಂಡು ಪರಿಶೀಲನೆ ನಡೆಸಿ ಮಾಹಿತಿಯನ್ನು ಸಂಗ್ರಹಿಸ ತೊಡಗಿದ್ದಾರೆ.