ಬೆಂಗಳೂರು: 2023-24 ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಆರಂಭವಾಗಿದೆ. ಸಿಎಂ ಬೊಮ್ಮಾಯಿ ಅವರು ಬಜೆಟ್ ಮಂಡನೆ ಮಾಡುತ್ತಿದ್ದಾರೆ.
ಇದಕ್ಕೂ ಮೊದಲು ಬಜೆಟ್’ಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿತು. ಬೆಂಗಳೂರಿನ ಆರ್ ಟಿ ನಗರದ ಮುತ್ತಪ್ಪ ಬ್ಲಾಕ್’ನ ಶ್ರೀ ಕಂಠೇಶ್ವರ ದೇವಸ್ಥಾನ ಹಾಗೂ ಬಾಲಬ್ರುಯಿ ಬಳಿಯ ಮಾರುತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನೇರವಾಗಿ ವಿಧಾನಸೌಧಕ್ಕೆ ಆಗಮಿಸಿದರು.
ಬಜೆಟ್’ನ ಮುಖ್ಯಾಂಶಗಳು…..
ಮುಂದಿನ 25 ವರ್ಷಗಳ ದೂರದೃಷ್ಟಿ ಹೊಂದಿರುವ ಬಜೆಟ್ ಇದಾಗಿದೆ ಎಂದು ಸಿಎಂ ಬೊಮ್ಮಾಯಿ ಇಂದಿನ ಬಜೆಟ್ನಲ್ಲಿ ವ್ಯಾಖ್ಯಾನಿಸಿದ್ದಾರೆ.
-ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ
-ಶಾಲಾ-ಕಾಲೇಜ್ ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್ ಒದಗಿಸುವುದಾಗಿ ಸಿಎಂ ಬೊಮ್ಮಾಯಿ ಘೋಷಿಸಿದ್ದಾರೆ.
-ಗೃಹಿಣಿಯರಿಗೆ ತಿಂಗಳಿಗೆ ₹ 500 ಸಹಾಯ ಧನ
-ದೇವಸ್ಥಾನಗಳು ಮತ್ತು ಮಠಗಳ ಜೀರ್ಣೋದ್ಧಾರಕ್ಕೆ 1 ಸಾವಿರ ಕೋಟಿ
-ಮಹಿಳಾ ಸಂಘಟಿತ ಕಾರ್ಮಿಕರಿಗೂ ಉಚಿತ ಬಸ್ ಪಾಸ್