ಬೆಂಗಳೂರು: ರೈತರಿಗೆ ಶೂನ್ಯ ಬಡ್ಡಿದರದಲ್ಲಿ 5 ಲಕ್ಷ ರೂ.ವರೆಗೆ ಸಾಲ ನೀಡಲಾಗುವುದು. ಮೊದಲು 3 ಲಕ್ಷ ರೂ.ವರೆಗೆ ಇದ್ದ ಸಾಲವನ್ನು 5 ಲಕ್ಷ ರೂ.ವರೆಗೆ ಹೆಚ್ಚಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.
ವಿಧಾನಸಭೆಯಲ್ಲಿ ಪ್ರಸಕ್ತ ಸಾಲಿನ ಬಜೆಟ್ ಮಂಡಿಸಿದ ಅವರು, ವಸತಿ ರಹಿತ ಮೀನುಗಾರರಿಗೆ ವಿಶೇಷ ಸೌಲಭ್ಯ, ದೋಣಿಗಳಿಗೆ ಮೋಟಾರ್ ಇಂಜಿನ್ ಅಳವಡಿಕೆ. ಮಹಿಳಾ ಕಾರ್ಮಿಕರಿಗೆ 500 ರೂ. ಸಹಾಯಧನ ನೀಡಲಾಗುವುದು ಎಂದು ತಿಳಿಸಿದ್ದಾರೆ.
ವಸತಿ ರಹಿತ ಮೀನುಗಾರರಿಗೆ ವಿಶೇಷ ಸೌಲಭ್ಯ, ದೋಣಿಗಳಿಗೆ ಮೋಟಾರ್ ಇಂಜಿನ್ ಅಳವಡಿಕೆ. ಮಹಿಳಾ ಕಾರ್ಮಿಕರಿಗೆ 500ರೂ. ಸಹಾಯಧನ ನೀಡಲಾಗುವುದು, ಶಾಲಾ, ಕಾಲೇಜು ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್ ವಿತರಿಸಲಾಗುವುದು ಎಂದು ತಿಳಿಸಿದ್ದಾರೆ.
ಆರ್ಥಿಕವಾಗಿ ಹಿಂದುಳಿದವರಿಗೆ ವಸತಿ ಯೋಜನೆ, ನೆಲೆ ಯೋಜನೆಯಡಿ 10 ಸಾವಿರ ಸೈಟ್ ವಿತರಣೆ ಮಾಡಲಾಗುವುದು. ಪ್ರತಿ ಗ್ರಾ.ಪಂ.ಗೆ 10 ಲಕ್ಷ ರೂ. ಬೆಂಗಳೂರು ಅಭಿವೃದ್ಧಿಗೆ 10 ಸಾವಿರ ಕೋಟಿ ರೂ. ನೀಡಲಾಗುವುದು ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.