ಲಾಡ್ಲೇ ಮಶಾಕ್ ದರ್ಗಾದಲ್ಲಿ ಇಂದು ಪೂಜೆ| ಅಳಂದದಲ್ಲಿ ನಿಷೇಧಾಜ್ಞೆ ಜಾರಿ

Prasthutha|

ಕಲಬುರಗಿ: ಆಳಂದ ತಾಲೂಕಿನ ಲಾಡ್ಲೇ ಮಶಾಕ್ ದರ್ಗಾದಲ್ಲಿ ಶಿವಲಿಂಗ ಪೂಜೆ ಮಾಡಲು ಕಲಬುರಗಿ ಹೈಕೋರ್ಟ್​ ಅವಕಾಶ ನೀಡಿದೆ.

- Advertisement -


ಈ ಹಿನ್ನೆಲೆಯಲ್ಲಿ ಇಂದು (ಫೆಬ್ರವರಿ 18) ಸ್ವಾಮೀಜಿಗಳು, ಹಿಂದೂಪರ ಸಂಘಟನೆ ಮುಖಂಡರು ಹಾಗೂ ಜನಪ್ರತಿನಿಧಿಗಳು ಪೂಜೆ ಸಲ್ಲಿಸಲಿದ್ದಾರೆ. ನಾಳೆ(ಫೆಬ್ರವರಿ 19) ದರ್ಗಾದಲ್ಲಿ ಉರೂಸ್ ಕೂಡಾ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಫೆಬ್ರವರಿ 17ರ ಮಧ್ಯರಾತ್ರಿ 12 ಗಂಟೆಯಿಂದ ಇಂದು (ಫೆ.18) ರಾತ್ರಿ 12ಗಂಟೆಯವರೆಗೂ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಯಶವಂತ್ ಗುರುಕರ್ ಆದೇಶ ಹೊರಡಿಸಿದ್ದಾರೆ. ಕಾನೂನು ಸುವ್ಯವಸ್ಥೆ, ಶಾಂತಿ ಕಾಪಾಡುವ ಉದ್ದೇಶದಿಂದ 144 ಸೆಕ್ಷನ್‌ ಜಾರಿಗೊಳಿಸಲಾಗಿದೆ ಎಂದು ಡಿಸಿ ಆದೇಶದಲ್ಲಿ ತಿಳಿಸಿದ್ದಾರೆ.

- Advertisement -

ಕಳೆದ ವರ್ಷ ಇದೇ ವಿಚಾರಕ್ಕೆ ಕಲ್ಲು ತೂರಾಟವಾಗಿ ಭಾರೀ ಹಿಂಸಾಚಾರ ನಡೆಸಿತ್ತು. ಇದರಿಂದ ಈ ಬಾರಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಎಚ್ಚರ ವಹಿಸಿದೆ.



Join Whatsapp