ಅಬಕಾರಿ ನೀತಿ ಅಕ್ರಮ: ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾಗೆ ಮತ್ತೆ ಸಮನ್ಸ್

Prasthutha|

ನವ ದೆಹಲಿ: ಅಬಕಾರಿ ಅಕ್ರಮ ಸಂಬಂಧಿಸಿದಂತೆ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಸಿಬಿಐ ಮತ್ತೆ ಸಮನ್ಸ್ ನೀಡಿದೆ.

- Advertisement -


ಅಬಕಾರಿ ನೀತಿಯಲ್ಲಿ ಕೋಟ್ಯಂತರ ರೂಪಾಯಿ ಹಗರಣ ನಡೆದಿದೆ, ಸಿಬಿಐ ತನಿಖೆಗೆ ವಹಿಸಬೇಕು ಎಂದು ಅಲ್ಲಿನ ರಾಜ್ಯಪಾಲ ವಿ.ಕೆ.ಸಕ್ಸೇನಾ ಅವರು ಕೇಂದ್ರಕ್ಕೆ ಪತ್ರ ಬರೆದಿದ್ದರು. ಅದರಂತೆ ಈಗ ಇಡಿ ಮತ್ತು ಸಿಬಿಐ ಎರಡೂ ತನಿಖಾ ಸಂಸ್ಥೆಗಳು ಈ ಪ್ರಕರಣವನ್ನು ತನಿಖೆಗೆ ಕೈಗೆತ್ತಿಕೊಂಡಿವೆ. ಈಗಾಗಲೇ ಹಲವರ ಬಂಧನವಾಗಿದೆ. ದೆಹಲಿ ಅಬಕಾರಿ ಇಲಾಖೆ ಜವಾಬ್ದಾರಿ ಮನೀಶ್ ಸಿಸೋಡಿಯಾ ಅವರದ್ದೇ ಆಗಿರುವುದರಿಂದ, ಅವರನ್ನೂ ಈಗಾಗಲೇ ವಿಚಾರಣೆಗೆ ಒಳಪಡಿಸಲಾಗಿದ್ದು, ಈಗ ಮತ್ತೊಮ್ಮೆ ಸಿಬಿಐನಿಂದ ಸಮನ್ಸ್ ಜಾರಿ ಮಾಡಿದೆ.



Join Whatsapp