ನವದೆಹಲಿ: ಭಯೋತ್ಪಾದನೆ ಚಟುವಟಿಕೆ ಹಾಗೂ ಗೂಂಡಾಗಿರಿ ಪ್ರಕರಣಗಳಿಗೆ ಸಂಬಂಧಿಸಿದಂತೆ ಉತ್ತರ ಭಾರತದ 8 ರಾಜ್ಯಗಳ 70ಕ್ಕೂ ಹೆಚ್ಚು ಕಡೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ ಐಎ) ಅಧಿಕಾರಿಗಳು ಇಂದು ಬೆಳಗ್ಗೆ ದಾಳಿ ನಡೆಸಿದ್ದಾರೆ.
ಪಂಜಾಬ್, ಹರಿಯಾಣ, ರಾಜಸ್ಥಾನ, ಉತ್ತರ ಪ್ರದೇಶ, ದೆಹಲಿ ಮತ್ತು ಛಂಡೀಗಢ, ಮಧ್ಯಪ್ರದೇಶಗಳಲ್ಲಿ ಗೂಂಡಾಗಿರಿ, ದರೋಡೆಕೋರರ ಉಪಟಳ ಹೆಚ್ಚಾದ ಬಗ್ಗೆ ದೂರುಗಳು ದಾಖಲಾಗಿದ್ದು, ಇದರ ವಿರುದ್ಧ ಅಧಿಕಾರಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಪಿಲಿಭಿತ್, ಪ್ರತಾಪ್ ಗಢ ಮತ್ತು ಮತ್ತಿತರ ಸ್ಥಳಗಳಲ್ಲಿ ಶೋಧ ನಡೆಸಲಾಗುತ್ತಿದೆ. ಪಂಜಾಬ್ ಗಾಯಕ ಸಿಧು ಮೂಸೆವಾಲಾ ಹತ್ಯೆ ಆರೋಪಿಗಳಾದ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್’ಗೆ ಸಂಬಂಧಿಸಿದ ಸ್ಥಳಗಳಲ್ಲಿ ಶೋಧ ಮುಂದುವರಿದಿದೆ.
ಕಳೆದ ವರ್ಷದ ನವೆಂಬರ್’ನಲ್ಲಿ ಪಂಜಾಬ್’ನ ರೂಪನಗರ ಜಿಲ್ಲೆಯಲ್ಲಿ ನಡೆದ ದಾಳಿಯಲ್ಲಿ ಈ ಗ್ಯಾಂಗ್’ನ ನಾಲ್ವರು ಸದಸ್ಯರನ್ನು ಬಂಧಿಸಲಾಗಿತ್ತು. ಗ್ಯಾಂಗ್’ಸ್ಟರ್’ಗಳ ವಿರುದ್ಧ ಕೊಲೆ ಮತ್ತು ಅಕ್ರಮ ಶಸ್ತ್ರಾಸ್ತ್ರಗಳಿಗೆ ಸಂಬಂಧಿಸಿದ ವಿವಿಧ ಸೆಕ್ಷನ್’ಗಳ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ.
ಉತ್ತರ ಭಾರತದ 8 ರಾಜ್ಯಗಳ 70ಕ್ಕೂ ಹೆಚ್ಚು ಕಡೆ NIA ದಾಳಿ
Prasthutha|