ಕಾಂಗ್ರೆಸ್ ಹಿರಿಯ ಮುಖಂಡ ಶಾಂತಲಿಂಗ ಸಾವಳಗಿ ಜೆಡಿಎಸ್ ಸೇರ್ಪಡೆ

Prasthutha|

ಬೀದರ್: ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಪಕ್ಷದ ಹಿರಿಯ ನಾಯಕ ಎಚ್.ಡಿ ಕುಮಾರಸ್ವಾಮಿರವರು, ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರ ಸಮ್ಮುಖದಲ್ಲಿ ಬೀದರ್ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾಗಿದ್ದ ಶಾಂತಲಿಂಗ ಸಾವಳಗಿ ಅವರು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು.

- Advertisement -


ಬೆಂಗಳೂರಿನ ಪದ್ಮನಾಭ ನಗರದಲ್ಲಿರುವ ಮಾಜಿ ಪ್ರಧಾನಮಂತ್ರಿಗಳು, ಜೆಡಿಎಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿರುವ ಎಚ್.ಡಿ ದೇವೇಗೌಡರ ನಿವಾಸದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿರವರು ಹಾಗೂ ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಶಾಂತಲಿಂಗ ಸಾವಳಗಿರವರನ್ನು ಜಾತ್ಯತೀತ ಜನತಾದಳ (ಜೆಡಿಎಸ್) ಪಕ್ಷಕ್ಕೆ ಬರಮಾಡಿಕೊಂಡು, ಪಕ್ಷ ಸಂಘಟನೆ, ಬಲವರ್ಧನೆಯಲ್ಲಿ ತೊಡಗಿಸಿಕೊಳ್ಳುವಂತೆ ತಿಳಿಸಿದರು.



Join Whatsapp