ಹೈಕೋರ್ಟ್‌ ಮಾಜಿ ನ್ಯಾಯಾಧೀಶ, ಪತ್ನಿ ವಿರುದ್ಧ ಪ್ರಕರಣ ದಾಖಲಿಸಿದ ಸಿಬಿಐ; ಏನಿದು ಪ್ರಕರಣ?

Prasthutha|

- Advertisement -

ಹೊಸದಿಲ್ಲಿ: 2.45 ಕೋಟಿ ರೂಪಾಯಿಗೂ ಅಧಿಕ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್‌ನ ಮಾಜಿ ನ್ಯಾಯಾಧೀಶ ಎಸ್.ಎನ್ ಶುಕ್ಲಾ ಹಾಗೂ ಅವರ ಪತ್ನಿ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿದೆ.

ಅವರು ಹೈಕೋರ್ಟ್ ನ್ಯಾಯಾಧೀಶರಾಗಿದ್ದ (2014-19) ಅವಧಿಯಲ್ಲಿ ಕೋಟ್ಯಂತರ ಮೌಲ್ಯದ ಅಕ್ರಮ ಆಸ್ತಿ ಸಂಪಾದಿಸಿದ್ದಾರೆ ಎಂಬ ಆರೋಪವಿದೆ.

- Advertisement -

ಇದು ಶುಕ್ಲಾ ವಿರುದ್ಧದ ಎರಡನೇ ಭ್ರಷ್ಟಾಚಾರ ಪ್ರಕರಣವಾಗಿದೆ. ಇದಕ್ಕೂ ಮುನ್ನ 2019ರ ಡಿಸೆಂಬರ್‌‌ನಲ್ಲಿ ಇವರ ವಿರುದ್ಧ ಪ್ರಕರಣವೊಂದು ದಾಖಲಾಗಿತ್ತು. ಲಕ್ನೋದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪಿಸುವ ವಿಚಾರದಲ್ಲಿ ತೀರ್ಪು ನೀಡಲು ಅವರು ಹಣ ಸ್ವೀಕರಿಸಿದ್ದರು ಎಂಬ ಆರೋಪ ಕೇಳಿಬಂದಿತ್ತು.



Join Whatsapp