ಪತ್ನಿ ಕೊಂದು ವಾಟ್ಸಾಪ್ ಸ್ಟೇಟಸ್ ಹಾಕಿ ಆತ್ಮಹತ್ಯೆ ಮಾಡಿಕೊಂಡ ಪತಿ

Prasthutha|

ಚಾಮರಾಜನಗರ: ಪತ್ನಿಯನ್ನು ಕೊಲೆ ಮಾಡಿ ವಾಟ್ಸಾಪ್ ಸ್ಟೇಟಸ್ ಹಾಕಿ ಪತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಮಹದೇಶ್ವರ ಬೆಟ್ಟದ ನಾಗಮಲೆಯಲ್ಲಿ ನಡೆದಿದೆ.

- Advertisement -

ನಾಗಮಲೆಯ ಲಕ್ಷ್ಮಿ ಕೊಲೆಯಾದ ಮಹಿಳೆಯಾಗಿದ್ದಾರೆ.
ಕೌಟುಂಬಿಕ ಕಲಹವೇ ಕೃತ್ಯಕ್ಕೆ ಕಾರಣ ಎನ್ನಲಾಗಿದೆ.

ಲಕ್ಷ್ಮಿ ತಮಿಳುನಾಡಿನ ಧರ್ಮಪುರಿ ಜಿಲ್ಲೆಯ ಎರಭಯ್ಯನ ಹಳ್ಳಿಯ ಮುನಿರಾಜ್ ಎಂಬವರನ್ನು ಮದುವೆಯಾಗಿದ್ದಳು. ಬಳಿಕ ತನ್ನ ಗಂಡನನ್ನು ತೊರೆದು ಬೇರೊಬ್ಬನೊಂದಿಗೆ ನಾಗಮಲೆಯಲ್ಲಿ ವಾಸವಾಗಿದ್ದಳು.

- Advertisement -

ಇದರಿಂದ ಬೇಸತ್ತಿದ್ದ ಗಂಡ ಮುನಿರಾಜ್ ಈ ಕೃತ್ಯ ಎಸಗಿರುವುದಾಗಿ ತಿಳಿದು ಬಂದಿದೆ.
ಪತ್ನಿಯ ಮೇಲೆ ಕಲ್ಲು ಎತ್ತಿಹಾಕಿ ಆಕೆಯ ರಕ್ತ ಸಿಕ್ತ ದೇಹವನ್ನು ಮೊಬೈಲ್‍ನಲ್ಲಿ ವೀಡಿಯೋ ಮಾಡಿ ವಾಟ್ಸಪ್ ಸ್ಟೇಟಸ್ ಹಾಕಿಕೊಂಡು ಬಳಿಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



Join Whatsapp