ಮುಸ್ಲಿಮರ ಮೀಸಲಾತಿ ಪ್ರಮಾಣವನ್ನು ಶೇ.4ರಿಂದ 7ಕ್ಕೆ ಹೆಚ್ಚಿಸಲು ಕಾಂಗ್ರೆಸ್ ಅಧಿವೇಶನದಲ್ಲಿ ನಿರ್ಣಯ ಕೈಗೊಳ್ಳಲಿ: ಎಸ್’ಡಿಪಿಐ ಆಗ್ರಹ

Prasthutha|

ಬೆಂಗಳೂರು: ಶಿಕ್ಷಣ, ಉದ್ಯೋಗ ಹಾಗೂ ರಾಜಕೀಯ ಪ್ರಾತಿನಿಧ್ಯದಿಂದ ವಂಚಿತರಾಗಿ ಹಿಂದುಳಿದಿರುವ ಮುಸ್ಲಿಂ ಸಮುದಾಯದ ಮೀಸಲಾತಿ ಪ್ರಮಾಣವನ್ನು ಶೇ.4ರಿಂದ 7ಕ್ಕೆ ಹೆಚ್ಚಿಸಬೇಕು. ಈ ಬಗ್ಗೆ ಕಾಂಗ್ರೆಸ್ ಮಹಾಧಿವೇಶನದಲ್ಲಿ ನಿಲುವು ಸ್ಪಷ್ಟಪಡಿಸಲಿ. ವೆಂಕಟಸ್ವಾಮಿ, ಚಿನ್ನಪ್ಪ ರೆಡ್ಡಿ ಆಯೋಗಗಳು ಮುಸ್ಲಿಂ ಸಮುದಾಯದ 17 ವೃತ್ತಿಪರ ಗುಂಪುಗಳನ್ನು ಹಿಂದುಳಿದ ಜಾತಿಗಳೆಂದು ಗುರುತಿಸಿವೆ ಎಂದು SDPI ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ಆಗ್ರಹಿಸಿದ್ದಾರೆ.

- Advertisement -


ಛತ್ತೀಸ್’ಗಡದ ರಾಯಪುರದಲ್ಲಿ ಶುಕ್ರವಾರ ಕಾಂಗ್ರೆಸ್ ಪಕ್ಷದ 85ನೇ ಮಹಾ ಅಧಿವೇಶನವನ್ನು ಉಲ್ಲೇಖಿಸಿ ಅಫ್ಸರ್ ಕೊಡ್ಲಿಪೇಟೆ ಟ್ವೀಟ್ ಮಾಡಿದ್ದು, ಮುಸ್ಲಿಮ್ ಸಮುದಾಯಕ್ಕೆ ನೀಡಲಾಗುತ್ತಿರುವ ಶೇಕಡಾ 4ರಷ್ಟು ಮೀಸಲಾತಿಯನ್ನು ಶೇಕಡಾ 7ಕ್ಕೆ ಹೆಚ್ಚಿಸಬೇಕು ಎಂದು ಆಗ್ರಹಿಸಿದ್ದಾರೆ.



Join Whatsapp