ಅಗ್ನಿಪಥ್ ಯೋಜನೆಯನ್ನು ಪ್ರಶ್ನಿಸಿದ್ದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿದ ದೆಹಲಿ ಹೈಕೋರ್ಟ್

Prasthutha|

ನವದೆಹಲಿ: ಅಗ್ನಿಪಥ್ ಯೋಜನೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳನ್ನು ದೆಹಲಿ ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ.

- Advertisement -

ಈ ಯೋಜನೆಯು ರಾಷ್ಟ್ರೀಯ ಭದ್ರತೆಯ ಆಧಾರದ ಮೇಲೆ ನೀತಿ ನಿರ್ಧಾರವಾಗಿದೆ ಎಂದು ಹೇಳಿದ ಹೈಕೋರ್ಟ್, “ಈ ನ್ಯಾಯಾಲಯವು ಅಗ್ನಿಪಥ್ ಯೋಜನೆಯಲ್ಲಿ ಹಸ್ತಕ್ಷೇಪ ಮಾಡಲು ಇಚ್ಛಿಸುವುದಿಲ್ಲ ಎಂದು ಹೇಳಿ ಈ ಸಂಬಂಧ ಸಲ್ಲಿಕೆಯಾಗಿದ್ದ  ಎಲ್ಲಾ ಅರ್ಜಿಗಳನ್ನು ವಜಾ ಮಾಡಿದೆ.

ರಾಷ್ಟ್ರೀಯ ಹಿತಾಸಕ್ತಿಯಿಂದ ಜಾರಿಗೆ ತಂದ ಯೋಜನೆ ಇದು ಎಂದು ತೀರ್ಪು ನೀಡುವ ವೇಳೆ ನ್ಯಾಯಾಲಯ ಹೇಳಿತು.

- Advertisement -

ಇದೇ ವೇಳೆ ಸೇನೆಗೆ ನೇಮಕಾತಿ ಪ್ರಕ್ರಿಯೆ ಸ್ಥಗಿತಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳನ್ನೂ ನ್ಯಾಯಾಲಯ ವಜಾಗೊಳಿಸಿದೆ. “ನೇಮಕಾತಿ ಪ್ರಕಟಿಸಿದ್ದ ಜಾಹೀರಾತುಗಳು ಶಾಸನಬದ್ಧ ನಿರೀಕ್ಷೆಯನ್ನೇನೂ ಹುಟ್ಟುಹಾಕಿಲ್ಲ” ಎಂದು ಪೀಠ ಹೇಳಿದೆ.

ನಾಲ್ಕು ವರ್ಷಗಳ ಮಟ್ಟಿಗೆ ಯುವಕರನ್ನು ಸೇನೆಗೆ ಸೇರಿಸಿಕೊಳ್ಳುವ ಅಗ್ನಿಪಥ್ ಯೋಜನೆಯಲ್ಲಿ ನಾಲ್ಕು ವರ್ಷಗಳ ನಂತರ ಆಯ್ಕೆಯಾದವರಲ್ಲಿ ಶೇ.25ರಷ್ಟು ಮಂದಿ ಅಭ್ಯರ್ಥಿಗಳನ್ನು ಮಾತ್ರ ಭಾರತೀಯ ಸೇನೆಯಲ್ಲಿ ಮುಂದುವರೆಸಿ ಉಳಿದವರಿಗೆ ಉದ್ಯೋಗ ನಿರಾಕರಿಸುತ್ತದೆ. ಯೋಜನೆ ಜಾರಿಯಾದ ವೇಳೆ ದೇಶದ ವಿವಿಧೆಡೆ ವ್ಯಾಪಕ ಹಿಂಸಾತ್ಮಕ ಪ್ರತಿಭಟನೆಗಳು ನಡೆದಿದ್ದವು. ಯೋಜನೆಯನ್ನು ಪ್ರಶ್ನಿಸಿ ಹಲವರು ನ್ಯಾಯಾಲಯದ ಕದ ತಟ್ಟಿದ್ದರು.



Join Whatsapp