ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ

Prasthutha|

ಶಿವಮೊಗ್ಗ: ನಗರದ ಸೋಗಾನೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ವಿಮಾನ ನಿಲ್ದಾಣವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಉದ್ಘಾಟಿಸಿದ್ದಾರೆ.

- Advertisement -

ಸಿಎಂ ಬಸವರಾಜ್ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ಅನೇಕ ಬಿಜೆಪಿ ನಾಯಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಶಿವಮೊಗ್ಗ– ಭದ್ರಾವತಿ ನಗರಗಳ ಮಧ್ಯೆ ಇರುವ ಸೋಗಾನೆ ಬಳಿ ₹449.22 ಕೋಟಿ ವೆಚ್ಚದಲ್ಲಿ 778.62 ಎಕರೆ ಪ್ರದೇಶದಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾಗಿದೆ. 2019ರಲ್ಲಿ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ವಿಮಾನ ನಿಲ್ದಾಣದ ವಿನ್ಯಾಸ ಬದಲಿಸಿತ್ತು. ಬೋಯಿಂಗ್ ನಂತಹ ದೊಡ್ಡ ವಿಮಾನ ಇಳಿಯಲು ಅವಕಾಶ ಕಲ್ಪಿಸಿ, ರನ್ ವೇ ಉದ್ದವನ್ನು 2.05 ಕಿ.ಮೀ ಬದಲಿಗೆ, 3.20 ಕಿ.ಮೀ.ಗೆ ಹೆಚ್ಚಿಸಲಾಯಿತು. ರಾತ್ರಿ ವೇಳೆ ವಿಮಾನ ಇಳಿಯುವ ಸೌಲಭ್ಯ ಕಲ್ಪಿಸಲಾಯಿತು. ಇದರಿಂದ ಯೋಜನಾ ವೆಚ್ಚ ₹ 220 ಕೋಟಿಯಿಂದ ₹449.22 ಕೋಟಿಗೆ ಏರಿಕೆಯಾಯಿತು.
ವಿಮಾನ ನಿಲ್ದಾಣದೊಂದಿಗೆ ಇತರೆ ಯೋಜನೆಗಳ ಕಾಮಗಾರಿಗಳ ಲೋಕಾರ್ಪಣೆ ಮತ್ತು ಶಂಕುಸ್ಥಾಪನೆಯನ್ನು ಪ್ರಧಾನಿಯವರು ನೆರವೇರಿಸಿದ್ದಾರೆ.



Join Whatsapp