ಬೆಂಗಳೂರು: ಮಾಜಿ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ಅವರು ಆಮ್ ಆದ್ಮಿ ಪಕ್ಷ ತೊರೆದು ಬುಧವಾರ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಕಚೇರಿಯಲ್ಲಿ ರಾಜ್ಯ ಬಿಜೆಪಿ ಘಟಕ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದರು. ಎಎಪಿಯಲ್ಲಿ ಪ್ರಬಲ ಹಾಗೂ ಮುಂಚೂಣಿ ನಾಯಕರಾಗಿ ಗುರುತಿಸಿಕೊಂಡಿದ್ದ ಭಾಸ್ಕರ್ ರಾವ್ ಅವರು ಬಿಜೆಪಿ ವಿರುದ್ಧ ಹಲವು ಭ್ರಷ್ಟಾಚಾರದ ಆರೋಪಗಳನ್ನು ಮಾಡಿದ್ದರು. ಆದರೆ, ಇದೀಗ ಅದೇ ಬಿಜೆಪಿಗೆ ಸೇರ್ಪಡೆಯಾಗಿದ್ದು ಅಚ್ಚರಿಗೆ ಕಾರಣವಾಗಿದೆ.