ಬೆಂಗಳೂರು: ಯುವತಿಯನ್ನು ಪಾಗಲ್ ಪ್ರೇಮಿಯೊಬ್ಬ 16 ಬಾರಿ ಚುಚ್ಚಿ ಕೊಲೆ ಮಾಡಿರುವ ಘಟನೆ ಮುರಗೇಶ್ ಪಾಳ್ಯದ ಎನ್ ಎಎಲ್ ರಸ್ತೆಯಲ್ಲಿ ನಡೆದಿದೆ.
ಲೀಲಾ ಪವಿತ್ರಾ (26) ಮೃತಪಟ್ಟವರು ಎಂದು ಗುರುತಿಸಲಾಗಿದ್ದು, ಈಕೆಯನ್ನು ಪಾಗಲ್ ಪ್ರೇಮಿ ದಿನಕರ್ ಬನ್ನಾಳ ಕೊಲೆ ಮಾಡಿದ್ದಾನೆ. ಆಂಧ್ರಪ್ರದೇಶ ಮೂಲದ ಲೀಲಾ ಪವಿತ್ರಾ, ಮೆಡಿಸನ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಲೀಲಾ ಪವಿತ್ರಾ ಹಾಗೂ ದಿನಕರ್ ಕಳೆದ 5 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಇತ್ತೀಚೆಗೆ ಲೀಲಾ, ದಿನಕರ್’ನನ್ನು ಅವಾಯ್ಡ್ ಮಾಡುತ್ತಿದ್ದರು ಎನ್ನಲಾಗಿದೆ. ಇದೇ ಕಾರಣಕ್ಕೆ ಲೀಲಾಳನ್ನು ಹತ್ಯೆಗೈದಿದ್ದಾನೆ ಎಂದು ತಿಳಿದುಬಂದಿದೆ.
ಲೀಲಾ ಕೆಲಸ ಮುಗಿಸಿ ಹೊರಗಡೆ ಬರುವುದನ್ನು ಕಾಯುತ್ತಿದ್ದ ದಿನಕರ್, ಮಾತನಾಡಿಸುವ ನೆಪದಲ್ಲಿ ಹತ್ತಿರ ಬಂದು ಆಕೆಯ ಎದೆ, ಹೊಟ್ಟೆ, ಕುತ್ತಿಗೆ ಭಾಗಕ್ಕೆ ಇರಿದು ಕೊಲೆ ಮಾಡಿದ್ದಾನೆ. ತೀವ್ರ ರಕ್ತ ಸ್ರಾವದಿಂದ ಆಕೆ ಮೃತಪಟ್ಟಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ಸಂಬಂಧ ಜೀವನ್ ಭೀಮಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.