RSS ಪಥಸಂಚಲನ: ಮಾರ್ಚ್ 3ರಂದು ಸುಪ್ರೀಂಕೋರ್ಟ್ ವಿಚಾರಣೆ

Prasthutha|

ನವದೆಹಲಿ: ಆರೆಸ್ಸೆಸ್ ಮತ್ತು ತಮಿಳುನಾಡು ಸರ್ಕಾರದ ನಡೆಯುತ್ತಿರುವ ಕಾನೂನು ಹೋರಾಟ ಮತ್ತೊಂದು ಮಜಲಿಗೆ ತಲುಪಿದೆ.
ಆರ್ ಎಸ್ ಎಸ್‌ಗೆ ಪಥಸಂಚಲನ ನಡೆಸಲು ಅನುಮತಿ ನೀಡಿರುವ ತಮಿಳುನಾಡು ಹೈಕೋರ್ಟ್‌ನ ತೀರ್ಪು ಪ್ರಶ್ನಿಸಿ ಅಲ್ಲಿನ ಸರ್ಕಾರ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಮಾರ್ಚ್‌ 3ರಂದು ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್‌ ಮತ್ತು ನ್ಯಾಯಮೂರ್ತಿ ಪಿ.ಎಸ್‌. ನರಸಿಂಹ ಅವರಿದ್ದ ಪೀಠ ಹೇಳಿದೆ.
ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಆರು ಜಿಲ್ಲೆಗಳಲ್ಲಿ ಬಹಿರಂಗವಾಗಿ ಪಥಸಂಚಲನ ನಡೆಸಲು ಅನುಮತಿ ನಿರಾಕರಿಸಿದ ರಾಜ್ಯಸರ್ಕಾರ, ಮೈದಾನದ ಒಳಗೆ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಿತ್ತು.
ಇದನ್ನು ತಮಿಳುನಾಡು ಏಕ ಸದಸ್ಯ ಪೀಠ ಸಹ ಎತ್ತಿಹಿಡಿದಿತ್ತು. ಆದರೆ, ಫೆ.10ರಂದು ಈ ಕುರಿತು ತೀರ್ಪು ನೀಡಿದ್ದ ಹೈಕೋರ್ಟ್‌ನ ವಿಭಾಗೀಯ ಪೀಠ, ಆರೂ ಜಿಲ್ಲೆಗಳಲ್ಲಿ ರಸ್ತೆಗಳಲ್ಲಿ ಪಥಸಂಚಲನ ನಡೆಸಲು ಆರ್ ಎಸ್ ಎಸ್’ಗೆ ಅನುಮತಿ ನೀಡಿತ್ತು ಎಂದು ಮುಕುಲ್‌ ಅವರು ಪೀಠಕ್ಕೆ ತಿಳಿಸಿದರು.
ಹೈಕೋರ್ಟ್‌ ವಿಭಾಗೀಯ ಪೀಠದ ತೀರ್ಪು ಪ್ರಶ್ನಿಸಿ ತಮಿಳುನಾಡು ಸರ್ಕಾರ ಸುಪ್ರೀಂ ಕೊರ್ಟ್‌ಗೆ ಅರ್ಜಿ ಸಲ್ಲಿಸಿದೆ.



Join Whatsapp