ನವದೆಹಲಿ: ಅಬಕಾರಿ ನೀತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐನಿಂದ ಬಂಧಿತರಾಗಿರುವ ದೆಹಲಿ ಮಾಜಿ ಸಚಿವ ಮನೀಶ್ ಸಿಸೋಡಿಯಾ ಅವರಿಗೆ ಸಿಬಿಐ ನ್ಯಾಯಾಲಯ ಸೋಮವಾರ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ತೀರ್ಪು ನೀಡಿದೆ.
ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಮಾರ್ಚ್ 20 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಸಿಸೋಡಿಯಾ ಅವರನ್ನು ದೆಹಲಿಯ ತಿಹಾರ್ ಜೈಲಿನಲ್ಲಿ ಇರಿಸಲಾಗುವುದು. ಸಿಸೋಡಿಯಾ ಸೋಮವಾರ ಮಧ್ಯಾಹ್ನ ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರಾಗಿದ್ದರು.
ಸಿಸೋಡಿಯಾ ಅವರನ್ನು 5 ದಿನಗಳ ರಿಮಾಂಡ್ ನಂತರ ಶನಿವಾರ 2 ದಿನಗಳ ಕಸ್ಟಡಿಗೆ ಕಳುಹಿಸಲಾಗಿತ್ತು.